ಅಪಘಾತ ಸಂಖ್ಯೆ ಇಳಿಕೆಗೆ ಸರ್ಕಾರ ಸೂಕ್ತ ಕ್ರಮಗಳನ್ನು ಕೈಗೊಳ್ಳುತ್ತಿದೆ: ರಾಮಲಿಂಗಾ ರೆಡ್ಡಿ

2020ರ ವೇಳೆಗೆ ಶೇ.50 ರಷ್ಟು ಅಪಘಾತ ಸಂಖೆಯನ್ನು ಕಡಿಮೆ ಮಾಡಲು ರಾಜ್ಯ ಸರ್ಕಾರ ಎಲ್ಲಾ ರೀತಿಯ ಸೂಕ್ತ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಅವರು ಸೋಮವಾರ ಹೇಳಿದ್ದಾರೆ...
ಸಾರಿಗೆ ಸಚಿವ ರಾಮಲಿಂಗ ರೆಡ್ಡಿ
ಸಾರಿಗೆ ಸಚಿವ ರಾಮಲಿಂಗ ರೆಡ್ಡಿ
Updated on: 

ಬೆಂಗಳೂರು; 2020ರ ವೇಳೆಗೆ ಶೇ.50 ರಷ್ಟು ಅಪಘಾತ ಸಂಖೆಯನ್ನು ಕಡಿಮೆ ಮಾಡಲು ರಾಜ್ಯ ಸರ್ಕಾರ ಎಲ್ಲಾ ರೀತಿಯ ಸೂಕ್ತ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಅವರು ಸೋಮವಾರ ಹೇಳಿದ್ದಾರೆ.

ನಗರದ ಪುರಭವನದಲ್ಲಿ ನಿನ್ನೆ ಆಯೋಜಿಸಿಲಾಗಿದ್ದ ಸಾರಿಗೆ ಇಲಾಖೆಯ 28ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ರಾಹ ಸಮಾರೋಪ ಸಮಾರಂಭದಲ್ಲಿ ಮಾತನಾಡಿರುವ ಅವರು, ರಸ್ತೆ ಸುರಕ್ಷತೆ ಬಗ್ಗೆ ರಾಜ್ಯ ಸರ್ಕಾರ ಸಾಕಷ್ಟು ಕ್ರಮಗಳನ್ನು ಕೈಗೊಂಡಿದೆ. ಆದರೂ ಅಪಘಾತಗಳ ಸಂಖ್ಯೆಯ ಮಾತ್ರ ಕಡಿಮೆಯಾಗುತ್ತಿಲ್ಲ ಎಂದು ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ.

ದ್ವಿಚಕ್ರ ವಾಹನ ಸವಾರರು ರಸ್ತೆ ನಿಯಮಗಳನ್ನು ಪಾಲಿಸಬೇಕಿದ್ದು, ಪ್ರಮುಖವಾಗಿ ಯುವಕರು ಈ ಬಗ್ಗೆ ಹೆಚ್ಚಿನ ಗಮನವನ್ನು ಕೊಡಬೇಕಿದೆ. ಅಪಘಾತ ಕುರಿತಂತೆ ಈಗಾಗಲೇ ಸಾಕಷ್ಟು ಜಾಗೃತಿ ಅಭಿಯಾನಗಳನ್ನು ನಡೆಸಲಾಗುತ್ತಿದೆ. ಕಳೆದ 1 ವಾರದಲ್ಲಿಯೇ ಸಾರಿಗೆ ಇಲಾಖೆ ವತಿಯಿಂದ ಸಾಕಷ್ಟು ಕಾರ್ಯಕ್ರಮಗಳನ್ನು ನಡೆಸಲಾಯಿತು. ವಿದ್ಯಾರ್ಥಿಗಳಿಗಾಗಿಯೂ ಸಾಕಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ರಕ್ತದಾನ, ಆರೋಗ್ಯ ತಪಾಸಣಾ ಶಿಬಿರಗಳನ್ನು ಆಯೋಜಿಸಲಾಗಿತ್ತು

ರಾಜ್ಯದಲ್ಲಿ ವಾಹನಗಳ ಸಂಖ್ಯೆಗಳು ಹೆಚ್ಚಾಗುತ್ತಿದ್ದು, ಪ್ರತೀ ವರ್ಷ ಶೇ.10 ರಿಂದ 11 ರಷ್ಟು ಹೊಸ ವಾಹನಗಳು ನೋಂದಣಿಯಾಗುತ್ತಿವೆ. ಇದರ ಜೊತೆಗೆ ರಸ್ತೆ ಅಪಘಾತಗಳ ಸಂಖ್ಯೆ ಕೂಡ ಹೆಚ್ಚಾಗುತ್ತಿವೆ. ವಾಹನ ಸವಾರರು ಸಂಚಾರ ನಿಯಮಗಳನ್ನು ಪಾಲಿಸಬೇಕಿದ್ದು ಈ ಮೂಲಕ ಅಪಘಾತಗಳನ್ನು ತಡೆಗಟ್ಟಬೇಕಿದೆ ಎಂದು ತಿಳಿಸಿದ್ದಾರೆ.

ಸಾರಿಗೆ ಇಲಾಖೆಯ ಪ್ರಧಾನ ಕಾರ್ಯಕರ್ಶಿ ಬಿ. ಬಸವರಾಜು ಮಾತನಾಡಿ, ರಸ್ತೆ ಸುರಕ್ಷತೆಗಾಗಿ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರ ರಚನೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ಮನವಿ ಮಾಡಲಾಗಿದೆ. ಮುಂದಿನ ಬಜೆಟ್ ನಲ್ಲಿ ಈ ಬಗ್ಗೆ ಘೋಷಣೆ ಮಾಡುವ ಸಾಧ್ಯತೆಗಳಿವೆ. 2020ರ ವೇಳೆ ಶೇ.50 ರಷ್ಟು ಅಪಘಾತ ಸಂಖ್ಯೆಗಳನ್ನು ಕಡಿಮೆ ಮಾಡಲು ರಾಜ್ಯ ಸರ್ಕಾರ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಹೇಳಿದ್ದಾರೆ.

ಕಾರ್ಯಕ್ರಮದಲ್ಲಿ ನಟ ಶಿವರಾಜ್ ಕುಮಾರ್ ಮತ್ತು ದೀಪಿಕಾ ದಾಸ್, ಕ್ರಿಕೆಟಿಗ ಮೈಕೆಲ್ ಹಂಫ್ರೆ ಬಿನ್ನಿ ಹಾಗೂ ಇನ್ನಿತರೆ ಹಿರಿಯ ಸರ್ಕಾರಿ ಅಧಿಕಾರಿಗಳು ಹಾಜರಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com