ಪೊಲೀಸರ ಮೇಲೆ ಹಲ್ಲೆ ಪ್ರಕರಣ: ಶಾಸಕ ವಿಜಯಾನಂದ ಕಾಶಪ್ಪನವರ್ ಗೆ ಹೈಕೋರ್ಟ್ ಛೀಮಾರಿ

ಇಬ್ಬರು ಪೇದೆಗಳ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ್ ಗೆ ಹಿನ್ನಡೆಯಾಗಿದೆ....
ವಿಜಯಾನಂದ ಕಾಶಪ್ಪನವರ
ವಿಜಯಾನಂದ ಕಾಶಪ್ಪನವರ

ಬೆಂಗಳೂರು: ಇಬ್ಬರು ಪೇದೆಗಳ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ್ ಗೆ ಹಿನ್ನಡೆಯಾಗಿದೆ. ಪೊಲೀಸರ ಮೇಲಿನ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಿಸಿದ್ದ ಎಫ್ ಐಆರ್ ವಜಾಗೊಳಿಸಲು ಹೈಕೋರ್ಟ್ ನಿರಾಕರಿಸಿದೆ.

ಅಧೀನ ನ್ಯಾಯಾಲಯದ ವಿಚಾರಣೆ ರದ್ದುಗೊಳಿಸಬೇಕು ಎಂದು ಕೋರಿ  ವಿಜಯಾನಂದ ಕಾಶಪ್ಪನವರ ಸಲ್ಲಿಸಿದ್ದ ಅರ್ಜಿಯನ್ನು ಮಂಗಳವಾರ ವಿಲೇವಾರಿ ಮಾಡಿದ ನ್ಯಾಯಮೂರ್ತಿ ಆನಂದ ಬೈರಾರೆಡ್ಡಿ ಅವರಿದ್ದ ಏಕಸದಸ್ಯ ಪೀಠವು, ಶಾಸಕರೊಬ್ಬರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸುತ್ತಾರೆ ಎಂದರೆ ಅದಕ್ಕೆ ಪ್ರಬಲ ಸಕಾರಣಗಳಿರಲೇಬೇಕು ಎಂದು ಅಭಿಪ್ರಾಯಪಟ್ಟರು.
 
ಅಂದು ನಡೆದ ಘಟನೆಯ ವಿವರಗಳನ್ನು ಚಿತ್ರೀಕರಿಸಲಾಗಿದೆ. ಆರೋಪಿ ವಿರುದ್ಧ ಸ್ಪಷ್ಟ ಸಾಕ್ಷ್ಯಗಳಿವೆ ವಿಚಾರಣೆ ವೇಳೆ ಪ್ರಾಸಿಕ್ಯೂಷನ್‌ ಪರವಾಗಿ ಹಾಜರಾಗಿದ್ದ ಚೇತನ್‌ ದೇಸಾಯಿ ಹೇಳಿದ್ದಾರೆ.

ವಿಜಯಾನಂದ ಕಾಶಪ್ಪನವರ ತಮ್ಮ ಸೋಮೇಗೌಡ ಮತ್ತು ಇತರರೊಂದಿಗೆ 2014ರ ಫೆಬ್ರುವರಿ 1ರಂದು ವಿಠಲ್ ಮಲ್ಯ ರಸ್ತೆಯಲ್ಲಿರುವ ಯು.ಬಿ.ಸಿಟಿ ಸ್ಕೈ ಬಾರ್‌ ಅಂಡ್‌ ರೆಸ್ಟೋರೆಂಟ್‌ನಲ್ಲಿ  ಕಬ್ಬನ್‌ ಪಾರ್ಕ್‌ ಪೊಲೀಸ್‌ ಠಾಣೆಯ ಕರ್ತವ್ಯನಿರತ ಪೊಲೀಸ್ ಕಾನ್‌ಸ್ಟೆಬಲ್‌ ಕಿರಣಕುಮಾರ್ ಹಾಗೂ ಪ್ರಶಾಂತ್ ನಾಯಕ್ ಎಂಬ ಪೇದೆಗಳ ಮೇಲೆ ಕೆನ್ನೆಗೆ ಹೊಡೆದ ಆರೋಪ ಎದುರಿಸುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com