ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಆರ್ ಕೆ ದತ್ತಾ ನೇಮಕ

ಕರ್ನಾಟಕದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಹಿರಿಯ ಐಪಿಎಸ್ ಅಧಿಕಾರಿ ರೂಪ್ ಕುಮಾರ್ ದತ್ತಾ ಅವರನ್ನು ಆಯ್ಕೆ ಮಾಡಲಾಗಿದೆ.
ಆರ್ ಕೆ ದತ್ತಾ (ಸಂಗ್ರಹ ಚಿತ್ರ)
ಆರ್ ಕೆ ದತ್ತಾ (ಸಂಗ್ರಹ ಚಿತ್ರ)

ಬೆಂಗಳೂರು: ಕರ್ನಾಟಕದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಹಿರಿಯ ಐಪಿಎಸ್ ಅಧಿಕಾರಿ ರೂಪ್ ಕುಮಾರ್ ದತ್ತಾ ಅವರನ್ನು ಆಯ್ಕೆ ಮಾಡಲಾಗಿದೆ.

ಇದೇ ಜನವರಿ 31ರಂದು ಹಾಲಿ ಡಿಜಿ-ಐಜಿಪಿ ಓಂ ಪ್ರಕಾಶ್ ಅವರು ನಿವೃತ್ತಿಯಾಗುತ್ತಿದ್ದು, ಅವರ ಸ್ಥಾನಕ್ಕೆ ಹಿರಿಯ ಐಪಿಎಸ್ ಅಧಿಕಾರಿ ಆರ್ ಕೆ ದತ್ತಾ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪೊಲೀಸ್  ಮಹಾ ನಿರ್ದೇಶಕ ಹುದ್ದೆಗೆ ಸಾಕಷ್ಟು ಪೈಪೋಟಿ ಇತ್ತಾದರೂ ಯಾವುದೇ ರೀತಿಯ ವಿವಾದಗಳಿಗೆ ಎಡೆ ಮಾಡಿಕೊಡಬಾರದು ಎಂದು ನಿರ್ಧರಿಸಿರುವ ಸಿಎಂ ಸಿದ್ದರಾಮಯ್ಯ ಅವರು ಸೇವಾ ಹಿರಿತನದ ಆಧಾರದ ಮೇಲೆ ಆರ್ ಕೆ  ದತ್ತಾ ಅವರನ್ನು ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಹುದ್ದೆಗೆ ನೇಮಕ ಮಾಡಿದ್ದಾರೆ.

1981ರ ಬ್ಯಾಚ್ ನ ಐಪಿಎಸ್ ಅಧಿಕಾರಿ ಆರ್ ಕೆ ದತ್ತಾ ಅವರು ಪ್ರಸ್ತುತ ಕೇಂದ್ರ ಸೇವೆಯಲ್ಲಿದ್ದು, ವಿಶೇಷ ಕಾರ್ಯದರ್ಶಿ (ಆಂತರಿಕ ಭದ್ರತೆ) ಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಹೀಗಾಗಿ ಅವರನ್ನು ಕೇಂದ್ರ ಸೇವೆಯಿಂದ ಬಿಡುಗಡೆ  ಮಾಡುವಂತೆ ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಪತ್ರಬರೆದಿದೆ. ಈ ಹಿಂದೆ ಸಿಬಿಐ ನಿರ್ದೇಶಕರ ಹುದ್ದೆಗೂ ಗುಜರಾತ್ ಕೇಡರ್ ಐಪಿಎಸ್ ಅಧಿಕಾರಿ ಆರ್ ಕೆ ದತ್ತಾ ಅವರ ಹೆಸರು ಕೇಳಿ ಬಂದಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com