ಸೇವಾ ಭದ್ರತೆಗೆ ಆಗ್ರಹಿಸಿ ಅತಿಥಿ ಉಪನ್ಯಾಸಕರಿಂದ ಉಪವಾಸ ಸತ್ಯಾಗ್ರಹ!

ರಾಜ್ಯದ ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವ ಉಪನ್ಯಾಸಕರಿಗೆ ಸೇವಾಭದ್ರತೆ ಕಲ್ಪಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘವು ಫೆಬ್ರುವರಿ 8 ರಂದು ಉಪವಾಸ ಸತ್ಯಾಗ್ರಹ ಹಮ್ಮಿಕೊಂಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳಲ್ಲಿ  ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವ ಉಪನ್ಯಾಸಕರಿಗೆ ಸೇವಾಭದ್ರತೆ ಕಲ್ಪಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸರ್ಕಾರಿ ಪ್ರಥಮದರ್ಜೆ  ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘವು ಫೆಬ್ರುವರಿ 8 ರಂದು ಉಪವಾಸ ಸತ್ಯಾಗ್ರಹ ಹಮ್ಮಿಕೊಂಡಿದೆ.

ನಗರದ ಫ್ರೀಡಂ ಪಾರ್ಕ್ ನಲ್ಲಿ ಫೆಬ್ರವರಿ 8ರಂದು ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಅತಿಥಿ ಉಪನ್ಯಾಸಕರ ಸಂಘ ಘೋಷಣೆ ಮಾಡಿದೆ. ಈ ಬಗ್ಗೆ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ  ಎನ್.ಶ್ರೀನಿವಾಸಾಚಾರ್ ಅವರು, "ರಾಜ್ಯದ ಸುಮಾರು 451 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 14 ಸಾವಿರಕ್ಕೂ ಅಧಿಕ ಮಂದಿ ಅತಿಥಿ ಉಪನ್ಯಾಸಕರು ಕಾರ್ಯ ನಿರ್ವಹಿಸುತ್ತಿದ್ದಾರೆ. ಸಾಕಷ್ಟು ವರ್ಷಗಳಿಂದ ಅವರಿಗೆ  ಸೇವಾಭದ್ರತೆ ಒದಗಿಸುವಂತೆ ಸರ್ಕಾರದ ಬಳಿ ಮನವಿ ಮಾಡಲಾಗಿತ್ತು. ಆದರೆ ಈ ವರೆಗೂ ಬೇಡಿಕೆ ಈಡೇರಿಲ್ಲ. ಅತಿಥಿ ಉಪನ್ಯಾಸಕರ ವಯೋಮಿತಿ ಮೀರುತ್ತಿದ್ದು, ಇದುವರೆಗೂ ಅವಪನ್ನು ಖಾಯಂಗೊಳಿಸಿಲ್ಲ ಎಂದು  ಹೇಳಿದ್ದಾರೆ.

ಈ ಹಿಂದೆ ಸಾಕಷ್ಟು ಬಾರಿ ಬೇಡಿಕೆಗಳನ್ನು ಈಡೇರಿಸುವಂತೆ ಹಲವು ಪ್ರತಿಭಟನೆ ನಡೆಸಿದ್ದೇವೆ. ಆದರೆ, ರಾಜ್ಯ ಸರ್ಕಾರ ಯಾವುದೇ ಬೇಡಿಕೆಗಳಿಗೂ ಸ್ಪಂದಿಸಿಲ್ಲ.  ಮುಂದಿನ ಶೈಕ್ಷಣಿಕ ವರ್ಷದಲ್ಲಿ ಈಗಿರುವ ಎಲ್ಲಾ ಅತಿಥಿ  ಉಪನ್ಯಾಸಕರನ್ನು ಕೈಬಿಡುವ ಹುನ್ನಾರ ನಡೆಯುತ್ತಿದೆ. ಕೇರಳ ಮತ್ತು ಆಂಧ್ರಪ್ರದೇಶದ ಸರ್ಕಾರಗಳು ಅಲ್ಲಿನ ಅತಿಥಿ ಉಪನ್ಯಾಸಕರಿಗೆ ತಿಂಗಳಿಗೆ ರು.25 ಸಾವಿರ ವೇತನ ಹಾಗೂ ಹಲವು ಸೌಲಭ್ಯಗಳನ್ನು ನೀಡುತ್ತಿವೆ. ನಮ್ಮ ರಾಜ್ಯ  ಸರ್ಕಾರ 9 ಸಾವಿರ ರು. ನೀಡುತ್ತಿದ್ದು, ಅದೂ ಕಳೆದ 8 ತಿಂಗಳಿಂದ ಸಂಬಳವನ್ನೇ ನೀಡಿಲ್ಲ. ಹೀಗಾಗಿ ಫೆಬ್ರವರಿ 8ರಂದು ಫ್ರೀಡಂ ಪಾರ್ಕ್ ನಲ್ಲಿ ಉಪವಾಸ ಸತ್ಯಾಗ್ರಹಕ್ಕೆ ಕರೆ ನೀಡಿದ್ದೇವೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com