

ಬೆಂಗಳೂರು: ರಾಜ್ಯದ ಸರ್ಕಾರಿ ಪದವಿ ಕಾಲೇಜಿನ ವಿದ್ಯಾರ್ಥಿಗಳಿಗೆ ಸರ್ಕಾರ ಹೊಸ ಜವಾಬ್ದಾರಿ ನೀಡಿದೆ.
ಸರ್ಕಾರಿ ಪದವಿ ಕಾಲೇಜಿನ ಬೋಧಕ ಹಾಗೂ ಬೋಧಕೇತರ ವರ್ಗದ ಸಿಬ್ಬಂದಿ ಯಾವ ರೀತಿಯ ಡ್ರೆಸ್ ಹಾಕಿಕೊಳ್ಳಬೇಕು ಎಂಬುದನ್ನು ನಿರ್ಧಾರ ಮಾಡಲಿದ್ದಾರೆ.
ಉಪನ್ಯಾಸಕರಿಗೆ ಡ್ರೆಸ್ ಕೋಡ್ ನಿರ್ಧರಿಸಲಿದ್ದಾರೆ ರಾಜ್ಯ ಸರ್ಕಾರಿ ಪದವಿ ಕಾಲೇಜು ವಿದ್ಯಾರ್ಥಿಗಳು. ರಾಜ್ಯದ ಎಲ್ಲಾ ಸರ್ಕಾರಿ ಪದವಿ ಕಾಲೇಜುಗಳ ಪ್ರಾಂಶಪಾಲರಿಗೆ ಹಾಗೂ ಕಾಲೇಜು ಶಿಕ್ಷಣ ಇಲಾಖೆಯ ಜಂಟಿ ಆಯುಕ್ತರಿಗೆ ಈ ಸಂಬಂಧ ಸುತ್ತೊಲೆ ಹೊರಡಿಸಿದೆ.
ಈ ನಿರ್ಧಾರದಿಂದ ಉನ್ನತ ಶಿಕ್ಷಣ ವ್ಯವಸ್ಥೆಯಲ್ಲಿ ಹೆಚ್ಚಿನ ಶಿಸ್ತು ತರಬಹುದು ಎಂದು ಸುತ್ತೋಲೆಯಲ್ಲಿ ಹೇಳಲಾಗಿದೆ. ವಿದ್ಯಾರ್ಥಿಗಳ ಅಭಿಪ್ರಾಯ ಪಡೆದು ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗೆ ಡ್ರೆಸ್ ಕೋಡ್ ನಿರ್ಧರಿಸಬೇಕು ಎಂದು ಹೇಳಲಾಗಿದೆ. ಡ್ರೆಸ್ ಜೊತೆಗೆ ನೇಮ್ ಪ್ಲೇಟ್ ಮತ್ತು ಹುದ್ದೆಯಿರುವ ಬ್ಯಾಡ್ಜ್ ಕೂಡ ಧರಿಸಬೇಕು ಎಂದು ಹೇಳಲಾಗಿದೆ.
ಈ ಸಂಬಂಧ ಸೆಪ್ಟಂಬರ್ 2016 ರಲ್ಲಿ ಸುತ್ತೋಲೆ ಹೊರಡಿಸಲಾಗಿದೆ. ಆದರೆ ಈ ಬಗ್ಗೆ ಪ್ರತಿಕ್ರಿಯಿಸಿರುವ ಉಪನ್ಯಾಸಕರೊಬ್ಬರು, ನಾವು ಸಭ್ಯವಾಗಿರುವ ಡ್ರೆಸ್ ಗಳನ್ನೇ ಹಾಕಿಕೊಂಡು ಬರುತ್ತೇವೆ, ವಿದ್ಯಾರ್ಥಿಗಳು ಬಯಸುವ ಡ್ರೆಸ್ ಗಳನ್ನು ಹಾಕುವುದಿಲ್ಲ ಎಂದು ಹೇಳಿದ್ದಾರೆ.