ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ಡಿನೋಟಿಫಿಕೇಶನ್ ಪ್ರಕರಣದ ತನಿಖೆಗೆ ತಡೆ ನೀಡಲು ಹೈಕೋರ್ಟ್ ಸೋಮವಾರ ನಿರಾಕರಿಸಿದ್ದು, ಮಾಜಿ ಮುಖ್ಯಮಂತ್ರಿಗೆ ಮತ್ತೆ ಸಂಕಷ್ಟ ಎದುರಾಗಿದೆ.
2010ರಲ್ಲಿ ಗಂಗೇನಹಳ್ಳಿಯಲ್ಲಿ 1ಎಕರೆ 11ಗುಂಟೆ ಜಮೀನನ್ನು ಡಿನೋಟಿಫೈ ಮಾಡಿರುವ ಪ್ರಕರಣದ ಬಗ್ಗೆ ಲೋಕಾಯುಕ್ತ ಅಧಿಕಾರಿಗಳು ಬಿಎಸ್ ವೈ ವಿರುದ್ಧ ಎಫ್ಐಆರ್ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. ಏತನ್ಮಧ್ಯೆ ಪ್ರಕರಣದ ತನಿಖೆಗೆ ತಡೆ ನೀಡಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಡಿನೋಟಿಫಿಕೇಶನ್ ಪ್ರಕರಣದಲ್ಲಿ ಯಡಿಯೂರಪ್ಪ ಮತ್ತೆ ಸಂಕಷ್ಟಕ್ಕೆ ಸಿಲುಕಿಕೊಂಡತಾಗಿದೆ. ಹೈಕೋರ್ಟ್ ಪೀಠ ಜುಲೈ 7ಕ್ಕೆ ಅರ್ಜಿ ವಿಚಾರಣೆ ಮುಂದೂಡಿದೆ.