ಮಳೆ ಅಭಾವ: 60 ದಿನಗಳ ಕಾಲ ಮೋಡ ಬಿತ್ತನೆಗೆ ಸಚಿವ ಸಂಪುಟ ಅಸ್ತು!

ರಾಜ್ಯದಲ್ಲಿ ಈ ಬಾರಿಯೂ ಮುಂಗಾರು ಮಳೆ ವೈಫ‌ಲ್ಯವಾಗಿರುವ ಹಿನ್ನೆಲೆಯಲ್ಲಿ ಮೋಡ ಬಿತ್ತನೆಗೆ ರಾಜ್ಯ ಸಚಿವ ಸಂಪುಟ ತೀರ್ಮಾನ ಕೈಗೊಂಡಿದ್ದು, ಕಾವೇರಿ, ಮಲಪ್ರಭಾ, ತುಂಗಭದ್ರಾ ಜಲಾನಯನ ವ್ಯಾಪ್ತಿಯಲ್ಲಿ 60 ದಿನಗಳ ಕಾಲ ಮೋಡಬಿತ್ತನೆ ನಡೆಸಲು ನಿರ್ಧರಿಸಲಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 

ಬೆಂಗಳೂರು: ರಾಜ್ಯದಲ್ಲಿ ಈ ಬಾರಿಯೂ ಮುಂಗಾರು ಮಳೆ ವೈಫ‌ಲ್ಯವಾಗಿರುವ ಹಿನ್ನೆಲೆಯಲ್ಲಿ ಮೋಡ ಬಿತ್ತನೆಗೆ ರಾಜ್ಯ ಸಚಿವ ಸಂಪುಟ ತೀರ್ಮಾನ ಕೈಗೊಂಡಿದ್ದು, ಕಾವೇರಿ, ಮಲಪ್ರಭಾ, ತುಂಗಭದ್ರಾ ಜಲಾನಯನ ವ್ಯಾಪ್ತಿಯಲ್ಲಿ  60 ದಿನಗಳ ಕಾಲ ಮೋಡಬಿತ್ತನೆ ನಡೆಸಲು ನಿರ್ಧರಿಸಲಾಗಿದೆ.

ಸಚಿವ ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ ಅವರು, ಮೋಡಬಿತ್ತನೆ ಮಾಡಲು ಹೊಯ್ಸಳ ಪ್ರೈವೇಟ್ ಪ್ರಾಜೆಕ್ಟ್ ಸಂಸ್ಥೆಗೆ 30 ಕೋಟಿ  ರು. ಮೊತ್ತಕ್ಕೆ ಗುತ್ತಿಗೆ ನೀಡಲಾಗಿದೆ. ತತ್ ಕ್ಷಣದಿಂದಲೇ ಮೋಡ ಬಿತ್ತನೆ ಪ್ರಾರಂಭಿಸಲು ಅಭಿವೃದ್ಧಿ ಆಯುಕ್ತರಿಗೆ ಸೂಚನೆ ನೀಡಲಾಗಿದ್ದು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ನೇತೃತ್ವದಲ್ಲಿ ಮೋಡಬಿತ್ತನೆ  ನಡೆಯಲಿದ್ದು, ಸ್ಥಳ ಗುರುತಿಸುವಿಕೆಯೂ ಆಗಲಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ ಮುಂಗಾರು ದುರ್ಬಲ ಹಿನ್ನೆಲೆಯಲ್ಲಿ ಮೋಡ ಬಿತ್ತನೆಗೆ ತೀರ್ಮಾನಿಸಲಾಗಿದ್ದು, ಈಗಾಗಲೇ ಕೆಲವೆಡೆ ಕುಡಿಯವ ನೀರಿಗೂ ಸಮಸ್ಯೆ ಉಂಟಾಗಿದೆ. ಹೀಗಾಗಿ, ಮೋಡಬಿತ್ತನೆ ಅನಿವಾರ್ಯ ಎಂದು ಸಚಿವರು  ಸಮರ್ಥಿಸಿಕೊಂಡರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com