ರಾಜ್ಯ
ಕೂಡಲಸಂಗಮದ ಅಭಿವೃದ್ಧಿಗೆ 139 ಕೋಟಿ ರೂಪಾಯಿ ವೆಚ್ಚದ ಯೋಜನೆ
ಕೂಡಲಸಂಗಮದ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ ಯೋಜನೆ ರೂಪಿಸಿದ್ದು, 12 ನೇ ಶತಮಾನದ ಸಮಾಜ ಸುಧಾರಕ ಬಸವಣ್ಣನವರ ವಿಚಾರಧಾರೆಗಳನ್ನು ಉತ್ತೇಜಿಸಿ, ಅಭಿವೃದ್ಧಿಪಡಿಸಲು ನಿರ್ಧರಿಸಿದೆ.
ಬೆಂಗಳೂರು: ಕೂಡಲಸಂಗಮದ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ ಯೋಜನೆ ರೂಪಿಸಿದ್ದು, 12 ನೇ ಶತಮಾನದ ಸಮಾಜ ಸುಧಾರಕ ಬಸವಣ್ಣನವರ ವಿಚಾರಧಾರೆಗಳನ್ನು ಉತ್ತೇಜಿಸಿ, ಅಭಿವೃದ್ಧಿಪಡಿಸಲು ನಿರ್ಧರಿಸಿದೆ.
ದೆಹಲಿಯ ಸ್ವಾಮಿನಾರಾಯಣ ಅಕ್ಷರಧಾಮ ದೇವಾಲಯದ ಮಾದರಿಯಲ್ಲಿ ಕೂಡಲ ಸಂಗಮವನ್ನು ಅಭಿವೃದ್ಧಿಪಡಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದ್ದು, 139 ಕೋಟಿ ರೂಪಾಯಿ ವೆಚ್ಚದಲ್ಲಿ ಯೋಜನೆ ಸಿದ್ಧಪಡಿಸಿದ್ದು, ಕೃಷ್ಣ ಭಾಗ್ಯ ಜಲ ನಿಗಮ್ ಲಿಮಿಟೆಡ್ ಮೂಲಕ ಇದನ್ನು ಜಾರಿಗೊಳಿಸಲಾಗುತ್ತದೆ. ಬಸವ ಅಂತಾರಾಷ್ಟ್ರೀಯ ಕೇಂದ್ರ, ಯಾತ್ರಾರ್ಥಿಗಳಿಗೆ ಚತ್ರ ನಿರ್ಮಿಸುವುದು, ಕಲ್ಯಾಣ ಮಂಟಪ, ಮಿನಿ ಥಿಯೇಟರ್, ವಿಜಯಪುರ ಜಿಲ್ಲೆಯ ಕೂಡಲ ಸಂಗಮದ ಬಳಿ ಓರಿಯಂಟೇಷನ್ ಸೆಂಟರ್ ನಿರ್ಮಿಸುವುದು ಯೋಜನೆಯ ಭಾಗವಾಗಿದೆ.
ಚಿಕ್ಕಸಂಗಮದ ಬಳಿಯೂ ಇದೇ ಮಾದರಿಯಲ್ಲಿ ಅಭಿವೃದ್ಧಿ ಕಾರ್ಯಗಳು ನಡೆಯಲಿದ್ದು, ಚತ್ರ, ಅತಿಥಿ ಗೃಹ, ಸ್ನಾನ ಘಟ್ಟಗಳ ನಿರ್ಮಾಣ ಸೇರಿದಂತೆ ಹಲವು ಅಭಿವೃದ್ಧಿ ಯೋಜನೆಗಳು ಜಾರಿಗೆ ಬರಲಿವೆ ಎಂದು ಜಲಸಂಪನ್ಮೂಲ ಸಚಿವ ಎಂಬಿ ಪಾಟೀಲ್ ಹೇಳಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ