ರಾಜ್ಯ

ಬೆಂಗಳೂರು: ಕ್ರೆಡಿಟ್ ಕಾರ್ಡ್ ಮೂಲಕ ಬ್ಯಾಂಕ್ ಗೆ 50 ಲಕ್ಷ ರು. ವಂಚನೆ, ಇಬ್ಬರ ಬಂಧನ

ನಕಲಿ ದಾಖಲೆಗಳನ್ನು ನೀಡಿ ಕ್ರೆಡಿಟ್ ಕಾರ್ಡ್ ಪಡೆದು ಸುಮಾರು 50 ಲಕ್ಷ ರುಪಾಯಿ ವಂಚಿಸಿದ ಆರೋಪದ ಮೇಲೆ ಸೈಬರ್ ಕ್ರೈಂ ಪೊಲೀಸರು....

ಬೆಂಗಳೂರು: ಕ್ರೆಡಿಟ್ ಕಾರ್ಡ್ ಮೂಲಕ ಬ್ಯಾಂಕ್ ಗೆ 50 ಲಕ್ಷ ರು. ವಂಚನೆ, ಇಬ್ಬರ ಬಂಧನ
ಸಾಂದರ್ಭಿಕ ಚಿತ್ರ
Published On :
ಬೆಂಗಳೂರು: ನಕಲಿ ದಾಖಲೆಗಳನ್ನು ನೀಡಿ ಕ್ರೆಡಿಟ್ ಕಾರ್ಡ್ ಪಡೆದು ಸುಮಾರು 50 ಲಕ್ಷ ರುಪಾಯಿ ವಂಚಿಸಿದ ಆರೋಪದ ಮೇಲೆ ಸೈಬರ್ ಕ್ರೈಂ ಪೊಲೀಸರು ಶುಕ್ರವಾರ ಇಬ್ಬರನ್ನು ಬಂಧಿಸಿದ್ದಾರೆ.
ಬಂಧಿತರು ನೀರನ್ ಜಯಪಾಲ್(37) ಹಾಗೂ ಅಬುಬಕರ್(39) ಎಂದು ಗುರುತಿಸಲಾಗಿದ್ದು, ಆರೋಪಿಗಳು ಕನಿಷ್ಠ ಮೂರು ಬ್ಯಾಂಕ್ ಗಳಿಗೆ ಮೋಸ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಗಳು ನಕಲಿ ವೋಟರ್ ಐಡಿ ಕಾರ್ಡ್, ನಕಲಿ ಚಾಲನಾ ಪರವಾನಗಿ ಹಾಗೂ ಪ್ರತಿಷ್ಠಿತ ಕಂಪನಿಗಳ ಆಫರ್ ಲೇಟರ್ ಗಳನ್ನು ನೀಡಿ ಪಾನ್ ಕಾರ್ಡ್ ಪಡೆದು ಬಳಿಕ ಅದನ್ನು ಬ್ಯಾಂಕ್ ಗೆ ನೀಡಿ ಖಾತೆ ತೆರೆಯುತ್ತಿದ್ದರು. ನಂತರ ಕ್ರೆಡಿಟ್ ಕಾರ್ಡ್ ಪಡೆದು ಬ್ಯಾಂಕ್ ಗಳಿಗೆ ಲಕ್ಷಾಂತರ ರುಪಾಯಿ ವಂಚಿಸಿದ್ದಾರೆ.
ಕ್ರೆಡಿಟ್ ಕಾರ್ಡ್ ನಿಂದ ಚಿನ್ನ ಹಾಗೂ ಇತರೆ ಬೆಲೆ ಬಾಳುವ ವಸ್ತುಗಳನ್ನು ಖರೀದಿಸಿ ಬಳಿಕ ಅವುಗಳನ್ನು ಒಎಲ್ ಎಕ್ಸ್ ನಲ್ಲಿ ಕಡಿಮೆ ಬೆಲೆಗೆ ಮಾರುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರಿಂದ ಒಂದು ಕಾರು, ಒಂದು ಬೈಕ್ ಹಾಗೂ ಒಂದು ಲ್ಯಾಪ್ ಟಾಪ್ ಅನ್ನು ಜಪ್ತಿ ಮಾಡಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.