ಹಲ್ಲೆಗೊಳಗಾಗಿದ್ದ ಆರ್ ಎಸ್ ಎಸ್ ಕಾರ್ಯಕರ್ತ ಶರತ್ ಸಾವು, ದ.ಕನ್ನಡದಲ್ಲಿ ನಿಷೇಧಾಜ್ಞೆ ಜಾರಿ!

ಕಳೆದ ಜುಲೈ 4ರಂದು ಮಾರಣಾಂತಿಕ ಹಲ್ಲೆಗೆ ಒಳಗಾಗಿದ್ದ ಆರ್​ಎಸ್​ಎಸ್​ ಕಾರ್ಯಕರ್ತ ಶರತ್​ ಮಡಿವಾಳ ಚಿಕಿತ್ಸೆ ಫಲಿಸದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಹತ್ಯೆಗೀಡಾದ ಆರ್ ಎಸ್ ಎಸ್ ಕಾರ್ಯಕರ್ತ ಶರತ್ ಮಡಿವಾಳ
ಹತ್ಯೆಗೀಡಾದ ಆರ್ ಎಸ್ ಎಸ್ ಕಾರ್ಯಕರ್ತ ಶರತ್ ಮಡಿವಾಳ

ದಕ್ಷಿಣ ಕನ್ನಡ: ಕಳೆದ ಜುಲೈ 4ರಂದು ಮಾರಣಾಂತಿಕ ಹಲ್ಲೆಗೆ ಒಳಗಾಗಿದ್ದ ಆರ್​ಎಸ್​ಎಸ್​ ಕಾರ್ಯಕರ್ತ ಶರತ್​ ಮಡಿವಾಳ ಚಿಕಿತ್ಸೆ ಫಲಿಸದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಮಂಗಳೂರಿನ ಖಾಸಗಿ ಎಜೆ ಆಸ್ಪತ್ರೆಯಲ್ಲಿ ಕಳೆದ ರಾತ್ರಿ ಶರತ್ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಜುಲೈ 4ರಂದು ರಾತ್ರಿ 9.30ರ ಸಂದರ್ಭದಲ್ಲಿ ಲ್ಯಾಂಡ್ರಿ ಶಾಪ್​ನಲ್ಲಿ ಕೆಲಸ ಮುಗಿಸಿ ಮನೆಗೆ  ಹೊರಡಲು ಸಿದ್ದತೆ ನಡೆಸುತ್ತಿದ್ದಾಗ ಮೂವರು ದುಷ್ಕರ್ಮಿಗಳು ದಾಳಿ ಮಾಡಿದ್ದರು. ಗಂಭೀರ ಗಾಯಗೊಂಡಿದ್ದ ಶರತ್​ ಅವರನ್ನು ಮಂಗಳೂರಿನ ಎಜೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ನಿಗಾ ಘಟಕದಲ್ಲಿ ಶರತ್ ​ಗೆ ಚಿಕಿತ್ಸೆ  ನೀಡಲಾಗುತ್ತಿತ್ತಾದರೂ, ಕಳೆದ ರಾತ್ರಿ ಶರತ್ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಕರಾವಳಿಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್!
ಏತನ್ಮಧ್ಯೆ ಶರತ್ ಸಾವು ಹಿನ್ನಲೆಯಲ್ಲಿ ಕರಾವಳಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ದಕ್ಷಿಣ ಕನ್ನಡದಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ ಎಂದು ತಿಳಿದುಬಂದಿದೆ. ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ  ಸೇರಿದಂತೆ ಕರಾವಳಿಯಾದ್ಯಂತ ಹೆಚ್ಚುವರಿ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದೆ

ಡಾ.ಪ್ರಭಾಕರ ಭಟ್​ಗೆ ಜೀವ ಬೆದರಿಕೆ
ಮಧ್ಯೆ, RSS ಮುಖಂಡ ಕಲ್ಲಡ್ಕ ಡಾ.ಪ್ರಭಾಕರ ಭಟ್​ಗೆ ಜೀವ ಬೆದರಿಕೆ ಬಂದಿದೆ ಎಂದು ಹೇಳಲಾಗುತ್ತಿದ್ದು. ಸಮುದಾಯವೊಂದರ ಫೇಸ್​​ಬುಕ್ ಪೇಜ್​ನಲ್ಲಿ ಪ್ರಭಾಕರ್ ಭಟ್‌ಗೆ ಬೆದರಿಕೆ ಹಾಕಲಾಗಿದೆ. "ಭಯೋತ್ಪಾದಕ ಕಲ್ಲಡ್ಕ  ಪ್ರಭಾಕರ ಭಟ್​ ಸತ್ತರೆ ರಾಷ್ಟ್ರಧ್ವಜ ಹಾಕಿ ಗೌರವಿಸುತ್ತೀರೋ ಇಲ್ಲಾ ಕೇಸರಿ ಧ್ವಜ ಹಾಕುತ್ತೀರೋ..? ಇವತ್ತೇ ಕೊನೆಯ ದಿನ" ಸ್ಟೇಟಸ್​​ ಹಾಕಲಾಗಿದೆ. ಈಗಾಗಲೇ ಆರ್‌ಎಸ್‌ಎಸ್‌ ಕಾರ್ಯಕರ್ತ ಶರತ್​ ಹತ್ಯೆ ಬಳಿಕ ಕರಾವಳಿ  ಬೂದಿಮುಚ್ಚಿದ ಕೆಂಡದಂತಾಗಿದ್ದು. ಇದರ ನಡುವೆಯೇ ಇಂತಹ ಪ್ರಚೋದನಾಕಾರಿ ಬರಹ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪರಿಸ್ಥಿತಿ ಗಂಭೀರವಾಗುವಂತೆ ಮಾಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com