ಮಂಗಳೂರು ಘಟನೆಗಳಿಂದಾಗಿ ರಾಜ್ಯ ಸರ್ಕಾರದ ವರ್ಚಸ್ಸಿಗೆ ಧಕ್ಕೆ: ಸಿಎಂ ಸಿದ್ದರಾಮಯ್ಯ

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ನಡೆದ ಇತ್ತೀಚಿನ ಕೆಲ ಗಲಭೆಗಳಿಂದಾಗಿ ರಾಜ್ಯ ಸರ್ಕಾರದ ವರ್ಚಸ್ಸಿಗೆ ಧಕ್ಕೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಸೋಮವಾರ ಹೇಳಿದ್ದಾರೆ.
ಸುದ್ದಿಗೋಷ್ಢಿಯಲ್ಲಿ ಸಿಎಂ ಸಿದ್ದರಾಮಯ್ಯ
ಸುದ್ದಿಗೋಷ್ಢಿಯಲ್ಲಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ನಡೆದ ಇತ್ತೀಚಿನ ಕೆಲ ಗಲಭೆಗಳಿಂದಾಗಿ ರಾಜ್ಯ ಸರ್ಕಾರದ ವರ್ಚಸ್ಸಿಗೆ ಧಕ್ಕೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಸೋಮವಾರ ಹೇಳಿದ್ದಾರೆ.

ಸೋಮವಾರ ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಕಚೇರಿಯಲ್ಲಿ ಉನ್ನತ ಅಧಿಕಾರಿಗಳ ಸಭೆ ಕರೆದಿದ್ದ ಸಿಎಂ ಸಿದ್ದರಾಮಯ್ಯ ಅವರು ಈ ವೇಳೆ ಮಂಗಳೂರು ಗಲಭೆ ಕುರಿತಂತೆ ಮಾಹಿತಿ ಪಡೆದರು. ಸಭೆಯಲ್ಲಿ  ಪಶ್ಚಿಮ ವಲಯ  ಐಜಿಪಿ, ಮಂಗಳೂರು ಪೊಲೀಸ್ ಆಯುಕ್ತ, ದಕ್ಷಿಣ ಕನ್ನಡ ಎಸ್ಪಿ, ಉಡುಪಿ ಎಸ್ಪಿಯನ್ನು ಮುಖ್ಯ ಮಂತ್ರಿ ಸಿದ್ದರಾಮಯ್ಯ ಇಂದು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

ಸಭೆಯಲ್ಲಿ ಪೊಲೀಸ್ ಅಧಿಕಾರಿಗಳ ಕಾರ್ಯವೈಖರಿ ಕುರಿತಂತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಕೋಮುಗಲಭೆ ಸೃಷ್ಟಿಸಲು ಕೆಲ ಸಂಘಟನೆಗಳ ಪ್ರಯತ್ನ ಮಾಡುತ್ತಿವೆ. ಇದಕ್ಕೆ ನೆರವಾಗುವಂತೆ ಸೆಕ್ಷನ್ 144  ಜಾರಿಯಲ್ಲಿದ್ದರೂ ಶವಯಾತ್ರೆಗೆ ಅವಕಾಶ ಮಾಡಿಕೊಟ್ಟಿದ್ದು ಏಕೆ ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಅಂತೆಯೇ ಗಲಭೆಗೆ ಕಾರಣರಾದ ಆರೋಪಿಗಳನ್ನು ಬಂಧಿಸಲು ತಕ್ಷಣ ಬಂಧಿಸುವಂತೆ ಅಧಿಕಾರಿಗಳಿಗೆ ಆದೇಶ ನೀಡಿದರು.

ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿ  ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು ಕಾನೂನನ್ನು ಯಾರೇ ಕೈಗೆತ್ತಿಕೊಂಡರೂ ಅವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಮಂಗಳೂರು ಗಲಭೆ ಸರ್ಕಾರದ ವರ್ಚಸ್ಸಿಗೆ ಧಕ್ಕೆ ತಂದಿದೆ. ಇಂತಹ ಘಟನೆಗಳ ಮರಕುಳಿಸದಂತೆ ಎಚ್ಚರ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಗಲಭೆಯಲ್ಲಿ ಮತೀಯ ಸಂಘಟನೆಗಳ  ಪಾತ್ರವಿದೆ. ಹೀಗಾಗಿ ಮತೀಯ ಗೂಂಡಾಗಳ ಬಗ್ಗೆ ತೀವ್ರ ನಿಗಾ ಇಡುವಂತೆ ಪೊಲೀಸರಿಗೆ ಸೂಚಿಸಲಾಗಿದೆ. ಅಂತೆಯೇ ಮಹಿಳೆಯರಿಗೆ ರಕ್ಷಣೆಗೆ ಸಿಗಬೇಕು. ದೌರ್ಜನ್ಯ ತಡೆಗಟ್ಟುವಂತೆ ಆದೇಶ ನೀಡಲಾಗಿದೆ ಎಂದು  ಸಿದ್ದರಾಮಯ್ಯ ಹೇಳಿದರು.

ಇತ್ತೀಚೆಗೆ ಕೊಲೆಗೀಡಾಗಿದ್ದ ಆರ್ ಎಸ್ ಎಸ್ ಕಾರ್ಯಕತ್ರ ಶರತ್ ಮಡಿವಾಳ ಅವರ ಶವಯಾತ್ರೆ ವೇಳೆ ಬಂಟ್ವಾಳದಲ್ಲಿ ಕಲ್ಲು ತೂರಾಟವಾಗಿ ವಿವಿಧ ಪ್ರಕರಣಗಳಲ್ಲಿ ಒಟ್ಟು ಐವರಿಗೆ ಚೂರಿ ಇರಿಯಲಾಗಿತ್ತು ಎಂದು ವರದಿಯಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com