ಕಾವೇರಿ ನೀರು ಹಂಚಿಕೆಯ ಅಂತಿಮ ವಿಚಾರಣೆ: ಮಂಡ್ಯ, ಕೆಆರ್ ಎಸ್ ಸುತ್ತಮುತ್ತ ಬಿಗಿ ಭದ್ರತೆ

ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಪಟ್ಟಂತೆ ಅಂತಿಮ ವಿಚಾರಣೆಯನ್ನು ಸುಪ್ರೀಂ...
ಕೃಷ್ಣ ರಾಜ ಸಾಗರ ಅಣೆಕಟ್ಟೆ(ಸಂಗ್ರಹ ಚಿತ್ರ)
ಕೃಷ್ಣ ರಾಜ ಸಾಗರ ಅಣೆಕಟ್ಟೆ(ಸಂಗ್ರಹ ಚಿತ್ರ)
ಮೈಸೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಪಟ್ಟಂತೆ ಅಂತಿಮ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಿನ್ನೆ ಕೈಗೆತ್ತಿಕೊಂಡ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ಕೃಷ್ಣ ರಾಜ ಸಾಗರ ಅಣೆಕಟ್ಟಿನ ಸುತ್ತಮುತ್ತ ಭದ್ರತೆಯನ್ನು ಹೆಚ್ಚಿಸಲಾಗಿದೆ.
2007ರ ಕಾವೇರಿ ನೀರು ವಿವಾದ ನ್ಯಾಯಾಧೀಕರಣ ನೀಡಿದ ತೀರ್ಪನ್ನು ಪ್ರಶ್ನಿಸಿ ಕಾವೇರಿ ನದಿ ತೀರದಲ್ಲಿರುವ ರಾಜ್ಯಗಳಾದ ಕರ್ನಾಟಕ, ತಮಿಳುನಾಡು ಮತ್ತು ಕೇರಳ ರಾಜ್ಯಗಳು ನ್ಯಾಯಾಲಯದಲ್ಲಿ ಅರ್ಜಿ ಹಾಕಿದ್ದವು.
ಕರ್ನಾಟಕ ರಾಜ್ಯದ ವಿರುದ್ಧ ತೀರ್ಪು ಬಂದರೆ ಜನರು ಆಕ್ರೋಶಗೊಂಡು ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ಹಾನಿಯುಂಟುಮಾಡದಂತೆ ಮತ್ತು ಜನರಿಗೆ ತೊಂದರೆ ನೀಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಮಂಡ್ಯ ಜಿಲ್ಲಾಡಳಿತ ಹಲವು ಕ್ರಮಗಳನ್ನು ಕೈಗೊಂಡಿದೆ. ಸಾರ್ವಜನಿಕ ಅಥವಾ ಖಾಸಗಿ ಆಸ್ತಿಗೆ ಧಕ್ಕೆಯನ್ನುಂಟುಮಾಡಿದವರನ್ನು ಸಹಿಸುವುದಿಲ್ಲ ಎಂದು ರೈತ ಸಂಘಟನೆಗಳಿಗೆ ಎಚ್ಚರಿಕೆ ನೀಡಲಾಗಿದೆ.
ಕರ್ನಾಟಕ ರಾಜ್ಯ ತುರ್ತು ಪಡೆ, 25 ದಾರ್, 400 ಹೋಂ ಗಾರ್ಡ್ ಗಳನ್ನು ನಿಯೋಜಿಸಲಾಗಿದೆ. ನೆರೆ ಜಿಲ್ಲೆಗಳಿಂದ ಸುಮಾರು 2,000 ಪೊಲೀಸರು ಮತ್ತು ಅಧಿಕಾರಿಗಳನ್ನು ಕರೆಸಲಾಗಿದೆ. ಸುಮಾರು 100 ಪೊಲೀಸರು ಕೆಆರ್ಎಸ್ ಜಲಾಶಯದ ಸುತ್ತಮುತ್ತ ಪ್ರದೇಶವನ್ನು ಸುತ್ತುವರಿದಿದ್ದಾರೆ.
ಈ ಮಧ್ಯೆ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಮತ್ತು ಶಾಸಕ ಕೆ.ಎಸ್.ಪುಟ್ಟಣ್ಣಯ್ಯ ಮಾತನಾಡಿ, ಕಾವೇರಿ ನೀರು ವಿವಾದದ ಶಾಶ್ವತ ಪರಿಹಾರಕ್ಕೆ ಸರ್ಕಾರ ಪ್ರಯತ್ನಿಸುತ್ತಿದೆ. ಒಪ್ಪಂದಕ್ಕೆ ಬರಲು ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳು ವಿಫಲವಾದರೆ ಈ ವಿವಾದ ಮುಂದುವರಿಯಲಿದೆ ಎಂದು ಹೇಳಿದ್ದಾರೆ.
ಕಳೆದ 25 ವರ್ಷಗಳಲ್ಲಿ ಕರ್ನಾಟಕ 1,280 ಟಿಎಂಸಿ ನೀರನ್ನು ತಮಿಳುನಾಡಿಗೆ ಬಿಡುಗಡೆ ಮಾಡಿದೆ. ಇನ್ನೊಂದೆಡೆ ನೀರನ್ನು ಬಳಸಿಕೊಳ್ಳದೆ 1,100 ಟಿಎಂಸಿ ನೀರು ಸಮುದ್ರಕ್ಕೆ ಪೋಲಾಗಿ ಹೋಗಿವೆ ಎಂದು ಹೇಳಿದರು.
ಕಾವೇರಿ ನೀರು ಹಂಚಿಕೆ ಪ್ರತಿಭಟನೆಯಲ್ಲು ಸುಮಾರು ಸಾವಿರ ಕೋಟಿ ರೂಪಾಯಿ ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿವೆ. ಈ ವಿವಾದದಲ್ಲಿ ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳ ಮುಖ್ಯಮಂತ್ರಿಗಳು ಮಾತುಕತೆ ನಡೆಸಿ ಬಗೆಹರಿಸಬೇಕು. ಕುಡಿಯುವ ನೀರಿನ ಉದ್ದೇಶಕ್ಕಾದರೂ ಮುಖ್ಯಮಂತ್ರಿಗಳು ಯೋಜನೆಯನ್ನು ರೂಪಿಸಬೇಕು ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com