ಎಲ್ಲಾ ಶಾಲೆಗಳಲ್ಲೂ ನಾಡಗೀತೆ ಹಾಡುವುದು ಕಡ್ಡಾಯ: ಶೀಘ್ರವೇ ಅಧಿಸೂಚನೆ

ರಾಜ್ಯದ ಎಲ್ಲಾ ಶಾಲೆಗಳಲ್ಲೂ ಅಂದರೆ ಸಿಬಿಎಸ್ ಸಿ ಮತ್ತು ಐಸಿಎಸ್ ಸಿ ಮಾನ್ಯತೆ ಪಡೆದ ಶಾಲೆಗಳಲ್ಲೂ ನಾಡಗೀತೆ ಹಾಡುವು ಕಡ್ಡಾಯ ಎಂಬ ಆದೇಶ ಶೀಘ್ರವೇ ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಬೆಂಗಳೂರು: ರಾಜ್ಯದ ಎಲ್ಲಾ ಶಾಲೆಗಳಲ್ಲೂ ಅಂದರೆ ಸಿಬಿಎಸ್ ಸಿ ಮತ್ತು ಐಸಿಎಸ್ ಸಿ ಮಾನ್ಯತೆ ಪಡೆದ ಶಾಲೆಗಳಲ್ಲೂ ನಾಡಗೀತೆ ಹಾಡುವು ಕಡ್ಡಾಯ ಎಂಬ ಆದೇಶ ಶೀಘ್ರವೇ ಹೊರಡಲಿದೆ.
ಹಲವು ಖಾಸಗಿ ಶಾಲೆಗಳಲ್ಲಿ ಬೆಳಗ್ಗಿನ ಅಸೆಂಬ್ಲಿ ವೇಳೆ ಮಕ್ಕಳಿಂದ ನಾಡಗೀತೆ ಹಾಡಿಸುತ್ತಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಠ್ ಹೇಳಿದ್ದಾರೆ. ಈ ಸಂಬಂಧ ಶೀಘ್ರವೇ ಇಲಾಖೆಯಿಂದ ಅಧಿಕೃತ ಪ್ರಕಟಣೆ ಹೊರಡಿಸಲಾಗುವುದು ಎಂದು ತಿಳಿಸಿದ್ದಾರೆ.
ಕೆಲ ಶಾಲೆಗಳಲ್ಲಿ ಅಸೆಂಬ್ಲಿ ವೇಳೆ ಕೇವಲ ರಾಷ್ಟ್ರಗೀತೆ ಮತ್ತು ಕೆಲವೊಂದು ಶ್ಲೋಕ ಮತ್ತು ಶಾಲೆಯ ಗೀತೆಗಳನ್ನು ಹಾಡಿಸಲಾಗುತ್ತಿದೆ, ಮಕ್ಕಳಿಗೆ ನಾಡಗೀತೆಯನ್ನು ಹಾಡಿಸುತ್ತಿಲ್ಲ ಎಂದು ಪೋಷಕರು  ದೂರು ನೀಡಿದ್ದಾರೆ ಎಂದು ತನ್ವೀರ್ ಸೇಠ್ ತಿಳಿಸಿದ್ದಾರೆ. 
ಕನ್ನಡ ಮತ್ತು ಸಂಸ್ಕೃತಿ ಇಲಾಖೆ  ಅಂತಿಮ ವರದಿಗಾಗಿ ಕಾಯುತ್ತಿದ್ದು, ವರದಿ ಬಂದ ಕೂಡಲೇ ಎಲ್ಲಾ ಶಾಲೆಗಳಿಗೂ ಸುತ್ತೋಲೆ ಹೊರಡಿಸುವುದಾಗಿ ಹೇಳಿದ ಅವರು, ನಾಡಗೀತೆಯ ಪ್ರತಿಯೊಂದು ಸಾಲನ್ನು ತಪ್ಪುಗಳಿಲ್ಲದೇ ಹಾಡಬೇಕಿದೆ.
ಶಿಕ್ಷಣ ಇಲಾಖೆಯ ಅಧಿಕಾರಿಗಳ ಪ್ರಕಾರ ನಾಡಗೀತೆ ಕಡ್ಡಾಯವಾಗಿ ಹಾಡಬೇಕು ಎಂಬುದು ಜಾರಿಯಾಗಿದೆ. ಆದರೆ ಕೆಲ ಖಾಸಗಿ ಶಾಲೆಗಳಲ್ಲಿ ಪಾಲಿಸುತ್ತಿಲ್ಲ. ಹೀಗಾಗಿ ಇಲಾಖೆ ಬೊಸ ಸುತ್ತೊಲೆ ಹೊರಡಿಸಲಿದೆ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com