ಡಿಐಜಿ ವರ್ಗಾವಣೆ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ರಾಜ್ಯ ಸರ್ಕಾರ ಇಂತಹ ನಿರ್ಧಾರ ಕೈಗೊಳ್ಳುತ್ತದೆ ಎಂದು ನನಗೆ ಗೊತ್ತಿತ್ತು. ಸರ್ಕಾರ ಭ್ರಷ್ಟಾಚಾರ ಮಾಡುವ ಜನರಿಗೆ ಮತ್ತು ಭ್ರಷ್ಟ ಕೆಲಸ ಮಾಡುವವರಿಗೆ ರಕ್ಷಣೆ ನೀಡುವುದರತ್ತ ಒಲವು ತೋರುತ್ತದೆ. ಅಕ್ರಮ ಚಟುವಟಿಕೆಗಳಿಗೆ ಹಾಗೂ ಅಕ್ರಮಗಳನ್ನು ನಡೆಸುವ ಜನರಿಗೆ ಸರ್ಕಾರ ರಕ್ಷಣೆ ನೀಡುತ್ತಿದೆ ಎಂದು ಹೇಳಿದ್ದಾರೆ.