ಡಿಐಜಿ ರೂಪಾ ಸೇರಿ ಐವರು ಐಪಿಎಸ್ ಅಧಿಕಾರಿಗಳ ವರ್ಗಾವಣೆ!

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನಡೆಯುತ್ತಿರುವ ಅವ್ಯವಾಹರಗಳ ಬಗ್ಗೆ ವರದಿ ಸಲ್ಲಿಸಿದ್ದ ಬಂಧಿಖಾನೆ ಡಿಐಜಿ...
ಡಿ.ರೂಪಾ ಮತ್ತು ಎನ್.ಎಸ್ ಮೆಘರಿಕ್
ಡಿ.ರೂಪಾ ಮತ್ತು ಎನ್.ಎಸ್ ಮೆಘರಿಕ್
ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನಡೆಯುತ್ತಿರುವ ಅವ್ಯವಾಹರಗಳ ಬಗ್ಗೆ ವರದಿ ಸಲ್ಲಿಸಿದ್ದ ಬಂಧಿಖಾನೆ ಡಿಐಜಿ ಡಿ.ರೂಪಾ ಮತ್ತು ಡಿಜಿಪಿ ಸತ್ಯನಾರಾಯಣರಾವ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಸಾರಿಗೆ ಸಂಚಾರ ಮತ್ತು ಸುರಕ್ಷತಾ ವಿಭಾಗದ ಐಜಿಪಿ ಆಗಿ ರೂಪಾ ಅವರನ್ನು ವರ್ಗಾವಣೆ ಮಾಡಲಾಗಿದೆ. ರೂಪಾ ಜೊತೆಗೆ ಐವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.
ಡಿ.ರೂಪಾ, ಡಿಜಿಪಿ ಎಂ.ಎನ್‌.ರೆಡ್ಡಿ ಸೇರಿದಂತೆ ಒಟ್ಟು ಐದು ಐಪಿಎಸ್‌ ಅಧಿಕಾರಗಳ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಕಾರಾಗೃಹಗಳ ಇಲಾಖೆಯ ಡಿಜಿಪಿ ಎಚ್.ಎನ್. ಸತ್ಯನಾರಾಯಣರಾವ್‌ ಸ್ಥಾನಕ್ಕೆ ಎಸಿಬಿಯ ಎಡಿಜಿಪಿ ಆಗಿರುವ ಎನ್‌.ಎಸ್‌.ಮೇಘರಿಖ್‌ ಅವರನ್ನು ನೇಮಿಸಲಾಗಿದ್ದು, ಸತ್ಯನಾರಾಯಣ ಅವರನ್ನು ಯಾವ ಸ್ಥಾನಕ್ಕೆ ವರ್ಗಾಯಿಸಲಾಗಿದೆ ಎಂಬುದನ್ನು ಆದೇಶದಲ್ಲಿ ನಮೂದಿಸಿಲ್ಲ.

ಎಸಿಬಿ ಡಿಜಿಪಿಯಾಗಿ ಗುಪ್ತಚರ ಇಲಾಖೆ ಡಿಜಿಪಿ ಎಂ.ಎನ್‌.ರೆಡ್ಡಿ, ಸಂಚಾರ ಮತ್ತು ರಸ್ತೆ ಸುರಕ್ಷತೆ ಆಯುಕ್ತರಾದ ಡಾ.ಎ.ಎಸ್‌.ಎನ್‌.ಮೂರ್ತಿ ಅವರನ್ನು ಅರಣ್ಯ ಘಟಕದ ಎಡಿಜಿಪಿ ಸ್ಥಾನಕ್ಕೆ ವರ್ಗಾಯಿಸಲಾಗಿದೆ.

ಎಂ.ಎನ್‌.ರೆಡ್ಡಿ ಅವರ ಸ್ಥಾನಕ್ಕೆ ಗುಪ್ತಚರ ಇಲಾಖೆ ಐಜಿಪಿ ಅಮ್ರಿತ್‌ ಪೌಲ್‌  ಅವರನ್ನು ನೇಮಿಸಿ ಸರ್ಕಾರ ಆದೇಶಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com