ಮಂಗಳೂರು: ರನ್‌ವೇ ದೀಪಕ್ಕೆ ಬಡಿದ ಏರ್ ಇಂಡಿಯಾ ವಿಮಾನ, ತಪ್ಪಿದ ದುರಂತ

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾರೀ ದೊಡ್ಡ ಮಟ್ಟದ ಅವಘಡವೊಂದು ತಪ್ಪಿದ್ದು, ವಿಮಾನದಲ್ಲಿದ್ದ ಎಲ್ಲ 186 ಮಂದಿ ಪ್ರಯಾಣಿಕರು ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾರೀ ದೊಡ್ಡ ಮಟ್ಟದ ಅವಘಡವೊಂದು ತಪ್ಪಿದ್ದು, ವಿಮಾನದಲ್ಲಿದ್ದ ಎಲ್ಲ 186 ಮಂದಿ ಪ್ರಯಾಣಿಕರು ಸುರಕ್ಷಿತವಾಗಿ ಪಾರಾಗಿದ್ದಾರೆ. 
ಏರ್  ಇಂಡಿಯಾ ಸಂಸ್ಥೆಗೆ ಸೇರಿದ  IX 814 ದುಬೈ-ಮಂಗಳೂರು ವಿಮಾನ  ಭಾನುವಾರ ಮುಂಜಾನೆ 4. 45ಕ್ಕೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್‌ ಆಗುವಾಗ, ಪ್ರತಿಕೂಲ ಹವಾಮಾನದಿಂದಾಗಿ ವಿಮಾನ ಲ್ಯಾಂಡಿಂಗ್‌ ವೇಳೆ ಪೈಲಟ್‌ನ ನಿಯಂತ್ರಣ ತಪ್ಪಿ ರನ್‌ವೇಯಿಂದ ಸ್ವಲ್ಪ ಬದಿಗೆ ಸರಿದಿದೆ. ಪರಿಣಾಮ ರನ್‌ವೇಗೆ ಹೊಂದಿಕೊಂಡಿರುವ ಮಾರ್ಗಸೂಚಿ ದೀಪಕ್ಕೆ ತಾಗಿದೆ. ವಿಮಾನವು ರನ್‌ವೇಯಲ್ಲಿ ಚಲಿಸುತ್ತ ಸುಮಾರು ಆರು ಮಾರ್ಗಸೂಚಿ ದೀಪಗಳಿಗೆ ತಾಗಿಕೊಂಡು ಹೋಯಿತು. ದೀಪಗಳಿಗಷ್ಟೇ ಹೆಚ್ಚಿನ ಹಾನಿಯಾಗಿದೆ. ವಿಮಾನಕ್ಕೆ ಯಾವುದೇ ರೀತಿಯ ಹಾನಿ ಸಂಭವಿಸಿಲ್ಲ.  
ಪೈಲಟ್‌ ವಿಮಾನವನ್ನು ಯಾವುದೇ ಅಪಾಯವಿಲ್ಲದೆ ಸುರಕ್ಷಿತವಾಗಿ ಲ್ಯಾಂಡಿಂಗ್‌ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.  
2010ರ ಮೇನಲ್ಲಿ ದುಬೈನಿಂದ ಮಂಗಳೂರಿಗೆ ಬಂದಿದ್ದ ಏರ್‌ ಇಂಡಿಯಾ ಸಂಸ್ಥೆಗೆ ಸೇರಿದ ವಿಮಾನವು  ಲ್ಯಾಂಡಿಂಗ್‌ ವೇಳೆ, ಪೈಲಟ್‌ನ ನಿಯಂತ್ರಣ ತಪ್ಪಿ ರನ್‌ವೇಯಿಂದ ಮುಂದಕ್ಕೆ ಚಲಿಸಿ ಬಹುದೊಡ್ಡ ದುರಂತ ಸಂಭವಿಸಿತ್ತು. ಈ ದುರಂತದಲ್ಲಿ 158 ಮಂದಿ ಸಾವನವ್ನಪ್ಪಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com