ಪರಪ್ಪನ ಅಗ್ರಹಾರ ಜೈಲು ಅಧೀಕ್ಷಕ ಕೃಷ್ಣ ಕುಮಾರ್ ಸಹ ಎತ್ತಂಗಡಿ

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿನ ಅಕ್ರಮಗಳ ಬಗ್ಗೆ ವರದಿ ನೀಡಿದ್ದ ಬಂಧಿಖಾನೆ ಡಿಐಜಿ ಡಿ.ರೂಪಾ ಮತ್ತು ಡಿಜಿಪಿ....
ಪರಪ್ಪನ ಅಗ್ರಹಾರ ಜೈಲು
ಪರಪ್ಪನ ಅಗ್ರಹಾರ ಜೈಲು
Updated on
ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿನ ಅಕ್ರಮಗಳ ಬಗ್ಗೆ ವರದಿ ನೀಡಿದ್ದ ಬಂಧಿಖಾನೆ ಡಿಐಜಿ ಡಿ.ರೂಪಾ ಮತ್ತು ಡಿಜಿಪಿ ಸತ್ಯನಾರಾಯಣರಾವ್ ಅವರು ಸೇರಿದಂತೆ ಐವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿದ ಬೆನ್ನಲ್ಲೇ ಪರಪ್ಪನ ಅಗ್ರಹಾರ ಜೈಲು ಮುಖ್ಯ ಅಧೀಕ್ಷಕ ಕೃಷ್ಣಕುಮಾರ್ ಅವರನ್ನು ಸಹ ರಾಜ್ಯ ಸರ್ಕಾರ ಸೋಮವಾರ ಎತ್ತಂಗಡಿ ಮಾಡಿದೆ. 
ಕೃಷ್ಣ ಕುಮಾರ್ ಅವರನ್ನು ಯಾವುದೇ ಸ್ಥಳ ನಿಯುಕ್ತಿಗೊಳಿಸಿದೇ ರಾಜ್ಯ ಸರ್ಕಾರ ವರ್ಗಾವಣೆ ಮಾಡಿದ್ದು, ಕೃಷ್ಣ ಕುಮಾರ್ ಅವರ ಸ್ಥಾನಕ್ಕೆ ಅವರ ಸಹಾಯಕ ಅಧಿಕಾರಿಯಾಗಿದ್ದ ಆರ್ ಅನಿತಾ ಅವರಿಗೆ ಹೆಚ್ಚುವರಿಯಾಗಿ ಜೈಲು ಅಧೀಕ್ಷಕ ಹುದ್ದೆ ವಹಿಸಲಾಗಿದೆ.
ಇಂದು ಬೆಳಗ್ಗಯಷ್ಟೇ ರಾಜ್ಯ ಸರ್ಕಾರ ಡಿ ರೂಪಾ ಅವರನ್ನು ಸಂಚಾರ ಮತ್ತು ರಸ್ತೆ ಸುರಕ್ಷತಾ ಡಿಐಜಿಯಾಗಿ ವರ್ಗಾವಣೆ ಮಾಡಿದ್ದು, ಸತ್ಯನಾರಾಯಣರಾವ್ ಅವರಿಗೆ ಯಾವುದೇ ಸ್ಥಾನ ನೀಡದೆ ಕಾರಾಗೃಹ ಡಿಜಿಪಿ ಸ್ಥಾನದಿಂದ ತೆರವುಗೊಳಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com