ತಹಶೀಲ್ದಾರ್ ಶಂಕರಯ್ಯ ಅವರ ಆತ್ಮಹತ್ಯೆಗೆ ಕಾರಣ ಇನ್ನು ತಿಳಿದು ಬಂದಿಲ್ಲ. ಮೂಲತಃ ಮಂಡ್ಯದವರಾದ ಶಂಕರಯ್ಯ ಅವರು ಟಿ.ನರಸೀಪುರದ ಸರ್ಕಾರಿ ವಸತಿ ಗೃಹದಲ್ಲಿ ಒಬ್ಬರೇ ವಾಸವಾಗಿದ್ದರು. ಕುಟುಂಬಸ್ಥರು ಮಂಡ್ಯದಲ್ಲಿದ್ದಾರೆ.
ಈ ಸಂಬಂಧ ಪಟ್ಟಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.