32 ಕೈದಿಗಳ ಮೇಲೆ ಹಲ್ಲೆ ಆರೋಪ: ಕಾರಾಗೃಹ ಇಲಾಖೆ ಅಧಿಕಾರಿಗಳಿಗೆ ಎನ್ ಎಚ್ ಆರ್ ಸಿ ನೊಟೀಸ್

ಕೇಂದ್ರ ಕಾರಾಗೃಹದಲ್ಲಿನ 32 ಕೈದಿಗಳ ಮೇಲೆ ನಡೆದ ಹಲ್ಲೆಯ ಸಂಬಂದ ನಾಲ್ಕು ವಾರಗಳಲ್ಲಿ ಸಂಪೂರ್ಣ ಮಾಹಿತಿ ನೀಡಬೇಕು ಎಂದು ರಾಷ್ಟ್ರೀಯ ಮಾನವ ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಬೆಂಗಳೂರು: ಕೇಂದ್ರ ಕಾರಾಗೃಹದಲ್ಲಿನ 32 ಕೈದಿಗಳ ಮೇಲೆ ನಡೆದ ಹಲ್ಲೆಯ ಸಂಬಂದ ನಾಲ್ಕು ವಾರಗಳಲ್ಲಿ ಸಂಪೂರ್ಣ ಮಾಹಿತಿ ನೀಡಬೇಕು ಎಂದು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಬಂಧೀಖಾನೆ ಅಧಿಕಾರಿಗಳಿಗೆ ನೊಟೀಸ್ ನೀಡಿದೆ.
ಡಿಐಜಿ ರೂಪಾ ಅವರಿಗೆ ಬೆಂಬಲ ವ್ಯಕ್ತಪಡಿಸಿದ 32 ಮಂದಿ ಕೈದಿಗಳನ್ನು ಸ್ಥಳಾಂತರಿಸುವ ವೇಳೆ ಜೈಲಿನ ಸಿಬಂದಿ ಗಂಭೀರವಾಗಿ ಹಲ್ಲೆ ನಡೆಸಿದ್ದಾರೆ ಎಂಬ ಆರೋಪದ ಮೇಲೆ  ಕಾರಾ ಗೃಹ ಇಲಾಖೆಯ ಪೊಲೀಸ್‌ ಮಹಾನಿರ್ದೇಶಕರಿಗೆ ಕಾರಣ ಕೇಳಿ ನೋಟಿಸ್‌ ಜಾರಿ ಮಾಡಿದ್ದು, 4 ವಾರಗಳಲ್ಲಿ ಉತ್ತರಿಸುವಂತೆ ಗಡುವು ನೀಡಿದೆ.
ಅಕ್ರಮದ ಬಗ್ಗೆ ರಾಜ್ಯ ಸರಕಾರ ತನಿಖೆಗೆ ಆದೇಶಿಸುತ್ತಿದ್ದಂತೆ 32 ಮಂದಿ ಕೈದಿಗಳನ್ನು ತಡರಾತ್ರಿ ವೇಳೆ ಮೈಸೂರು, ಬಳ್ಳಾರಿ, ಬೆಳಗಾವಿ ಮತ್ತು ದಾವಣಗೆರೆ ಜಿಲ್ಲಾ ಕಾರಾಗೃಹಗಳಿಗೆ ಸ್ಥಳಾಂತರಿಸಲಾಗಿದೆ. ಈ ವೇಳೆ ಜೈಲಿನ ಸಿಬಂದಿ ಅಮಾನುಷವಾಗಿ ಕೈದಿಗಳ ಮೇಲೆ ಹಲ್ಲೆ ನಡೆಸಿದ್ದಾರೆ. ಇದರ ಬಗ್ಗೆ ಆಯೋಗಕ್ಕೆ ಮಾಹಿತಿಯಿದ್ದು, ಇದು ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು  ಸಂಸದೆ ಶೋಭಾ ಕರಂದ್ಲಾಜೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಿದ್ದರು.
ಸರ್ಕಾರ ನೇಮಿಸಿರುವ ತನಿಖಾ ಸಮಿತಿ ಜೈಲಿಗೆ ಭೇಟಿ ನೀಡುವ ಮುನ್ನವೇ ಕೈದಿಗಳನ್ನು ಸ್ಥಳಾಂತರಿಸಿ ಹಲ್ಲೆ ನಡೆಸಿದೆ ಎಂಬ ಆರೋಪಗಳು ಕೇಳಿ ಬಂದಿವೆ. ಹಲ್ಲೆಗೊಳಗಾದ ಕೈದಿಗಳನ್ನು ಭೇಟಿ ಮಾಡಲು ಕುಟುಂಬಸ್ಥರಿಗೆ ಅವಕಾಶ ನೀಡುತ್ತಿಲ್ಲ ಎಂದು ಹೇಳಲಾಗಿತ್ತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com