ಬೆಳಗಾವಿ ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಬಿಟ್ಟುಬಿಡದೇ ಮಳೆ ಸುರಿಯುತ್ತಿದ್ದು, ಮಳೆ ಅವಾಂತರಕ್ಕೆ ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಹಳ್ಳಿ ಗ್ರಾಮದಲ್ಲಿ ಮನೆ ಕುಸಿದು ಮಲ್ಲಿಕಾರ್ಜುನ ಉರ್ಫ್ ಸಂತೋಷ ಮಸ್ಕಿ ಎಂಬುವವರು ಮೃತಪಟ್ಟಿದ್ದಾರೆ. ಮಣ್ಣಿನ ಅವಶೇಷದಡಿ ಸಿಲುಕಿದ್ದ ಮಸ್ಕಿ ದೇಹವನ್ನು ಗ್ರಾಮಸ್ಥರು ಹರಸಾಹಸಪಟ್ಟು ಹೊರತೆಗೆದಿದ್ದಾರೆ.