ರಾಜ್ಯ

ಪ್ರತ್ಯೇಕ ನಾಡಧ್ವಜ ವಿಚಾರ: ಸಿದ್ದರಾಮಯ್ಯ ವಿರುದ್ಧ ಕೈ ಅಧಿನಾಯಕಿ ಸೋನಿಯಾ ಗರಂ

ಪ್ರತ್ಯೇಕ ನಾಡಧ್ವಜ ವಿಚಾರ: ಸಿದ್ದರಾಮಯ್ಯ ವಿರುದ್ಧ ಕೈ ಅಧಿನಾಯಕಿ ಸೋನಿಯಾ ಗರಂ
ಸಂಗ್ರಹ ಚಿತ್ರ
Published On :

ನವದೆಹಲಿ: ಹೊಸ ನಾಡಧ್ವಜಕ್ಕೆ ಕಾನೂನು ಅಥವಾ ಸಾಂವಿಧಾನಿಕ ಸ್ಥಾನಮಾನ ಪಡೆಯಲು ಹೊರಟಿರುವ ಸಿಎಂ ಸಿದ್ದರಾಮಯ್ಯ ಅವರ ಪ್ರಸ್ತಾವನೆಗೆ ಸ್ವತಃ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಗರಂ ಆಗಿದ್ದಾರೆ ಎಂದು ತಿಳಿದುಬಂದಿದೆ.

ಪತ್ರಿಕೆಯೊಂದು ವರದಿ ಮಾಡಿರುವಂತೆ ಸಿದ್ದರಾಮಯ್ಯ ಅವರ ಪ್ರತ್ಯೇಕ ಧ್ವಜದ ಪ್ರಸ್ತಾವನೆ ಕುರಿತಂತೆ ಕಾಂಗ್ರೆಸ್ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತೀವ್ರ ಅಸಾಧಾನಗೊಂಡಿದ್ದು, ಚುನಾವಣೆ ಸಂದರ್ಭದಲ್ಲಿ  ಸುಖಾಸುಮ್ಮನೆ ಅನಾವಶ್ಯಕ ಗೊಂದಲಗಳನ್ನು ಮೈಮೇಲೆ ಏಕೆ ಎಳೆದುಕೊಳ್ಳುತ್ತೀರಿ? ಇಂತಹೂ ಸೂಕ್ಷ್ಮ ವಿವಾದಗಳಿಂದ ದೂರ ವಿರುವುದು ಒಳಿತು ಎಂದು ಸಲಹೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಪ್ರತ್ಯೇಕ ನಾಡ ಧ್ವಜಕ್ಕೆ ಸಂವಿಧಾನ ಮತ್ತು ಕಾನೂನು ಮಾನ್ಯತೆ ಇಲ್ಲ

ಇತ್ತ ಕರ್ನಾಟಕದ ಪ್ರಸ್ತಾವನೆಗೆ ಕೇಂದ್ರ ಸರ್ಕಾರ ಸೇರಿದಂತೆ ಸ್ವತಃ ಕಾಂಗ್ರೆಸ್ ಹೈಕಮಾಂಡ್ ಅಸಮ್ಮತಿ ವ್ಯಕ್ತಪಡಿಸಿದೆ. ಇದಕ್ಕೆ ಕಾರಣ ಯಾವುದೇ ರಾಜ್ಯಕ್ಕೂ ಪ್ರತ್ಯೇಕ ನಾಡ ಧ್ವಜ ಹೊಂದುವ ಅವಕಾಶ ಸಂವಿಧಾನ ಮತ್ತು  ಕಾನೂನಲ್ಲಿ ಇಲ್ಲ. ಈ ಹಿಂದೆ ನವೆಂಬರ್ 1ರಂದು ಎಲ್ಲ ಶಾಲಾ-ಕಾಲೇಜು ಹಾಗೂ ಸರ್ಕಾರಿ ಕಚೇರಿಗಳಲ್ಲಿ ನಾಡಧ್ವಜ ಹಾರಿಸುವಂತೆ ಸರ್ಕಾರಿ ಸುತ್ತೋಲೆ ಹೊರಡಿಸಲಾಗಿತ್ತು. ಆದರೆ, ಕರ್ನಾಟಕ ರಕ್ಷಣಾ ವೇದಿಕೆಗೆ ಸಂಬಂಧಿಸಿದ  ಪ್ರಕರಣದ ವಿಚಾರಣೆ ವೇಳೆ, ನಾಡಧ್ವಜ ವಿಚಾರಕ್ಕೆ ಸಂಬಂಧಿಸಿ ರಾಜ್ಯ ಹೈಕೋರ್ಟ್ ತನ್ನ ಸ್ಪಷ್ಟ ನಿಲುವು ತಿಳಿಸಿತ್ತು. ‘ಒಂದು ದೇಶ, ಒಂದು ಧ್ವಜ‘ ಎನ್ನುವ ನಿಯಮವಿರುವಾಗ ರಾಜ್ಯದ ಧ್ವಜಕ್ಕೆ ಕಾನೂನು ಮಾನ್ಯತೆ ಸಿಗುವುದಿಲ್ಲ  ಎನ್ನುವುದು ಕೋರ್ಟ್ ಅಭಿಪ್ರಾಯವಾಗಿತ್ತು. ಇದೇ ಕಾರಣದಿಂದ ರಾಜ್ಯ ಸರ್ಕಾರ ತಾನು ಹೊರಡಿಸಿದ್ದ ಸುತ್ತೋಲೆಯನ್ನು ಕನ್ನಡ ರಾಜ್ಯೋತ್ಸವಕ್ಕೂ ಮುಂಚೆ ಹೈಕೋರ್ಟ್​ನಲ್ಲಿ ಹಿಂಪಡೆದಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.