ಗಾಜನೂರಿನ ಬಳಿ ತುಂಬಿ ಹರಿಯುತ್ತಿರುವ  ತುಂಗಾ ನದಿ
ಗಾಜನೂರಿನ ಬಳಿ ತುಂಬಿ ಹರಿಯುತ್ತಿರುವ ತುಂಗಾ ನದಿ

ಕರ್ನಾಟಕ: ವಿವಿಧ ಜಿಲ್ಲೆಗಳಲ್ಲಿ ಮುಂಗಾರು ಮಳೆ ಸೃಷ್ಟಿಸಿದ ಅವಾಂತರಗಳು

ರಾಜ್ಯದ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದ್ದು, ನದಿ, ತೊರೆಗಳು ತುಂಬಿ ಹರಿಯುತ್ತಿವೆ. ಹಲವು ಮರಗಳು ಮುರಿದು ಬಿದ್ದಿವೆ. ರಸ್ತೆಗಳು...
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದ್ದು, ನದಿ, ತೊರೆಗಳು ತುಂಬಿ ಹರಿಯುತ್ತಿವೆ. ಹಲವು ಮರಗಳು ಮುರಿದು ಬಿದ್ದಿವೆ. ರಸ್ತೆಗಳು ಜಲಾವೃತವಾಗಿವೆ. ನೀರಿನಲ್ಲಿ ಕೊಚ್ಚಿಹೋದ ವ್ಯಕ್ತಿಯ ಶವ ಮೋರಿಯಲ್ಲಿ ಸಿಕ್ಕಿರುವ ಘಟನೆಗಳು ವರದಿಯಾಗಿವೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಗೆ ಇಬ್ಬರು ಬಲಿ
ಕಾರವಾರ: ಉತ್ತರ ಕನ್ನಡ ಜಿಲ್ಲೆಯ 11 ತಾಲೂಕುಗಳಲ್ಲಿ ಕಳೆದ ಮೂರು ನಾಲ್ಕು ದಿನಗಳಿಂದ ಉತ್ತಮ ಮಳೆಯಾಗಿದೆ. ಹಲವು ಮರಗಳು ಹಾಗೂ ವಿದ್ಯುತ್ ಕಂಬಗಳು ಧರೆಗುರುಳಿವೆ, ಹೀಗಾಗಿ ಹಲವೆಡೆ ವಿದ್ಯುತ್ ವ್ಯತ್ಯಯವಾಗಿದೆ. ಮಳೆ ಸಂಬಂಧಿತ ಅನಾಹುತಗಳಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. 
ಕಾರವಾರ ತಾಲೂಕಿನ ಸಿದ್ದರಗ್ರಾಮದಲ್ಲಿ 50 ವರ್ಷದ ವ್ಯಕ್ತಿ ನೀರಿನಲ್ಲಿ ಕೊಚ್ಚಿ ಹೋಗಿದ್ದಾನೆ, ಆನಂದ ವಿಷ್ಣು ನಾಯಕ್ ಶವ ಗ್ರಾಮದ ಹೊರ ವಲಯದಲ್ಲಿ ಪತ್ತೆಯಾಗಿದೆ. ಎಂದು ಪೊಲೀಸರು ತಿಳಿಸಿದ್ದಾರೆ.
ಇನ್ನೂ ಕಾರವಾರದ ಓಲ್ಡ್ ಮೀನು ಮಾರುಕಟ್ಟೆಯ ಸಮೀಪದ ಚರಂಡಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ. ಕೋಡಿಬಾಗ್ ಗ್ರಾಮದ ಅನಿಲ್ ಪೌಷ್ಕರ್ ಮೃತ ದುರ್ದೈವಿ. ಈತ ಮಧ್ಯಸೇವಿಸಿದ್ದ, ಹೀಗಾಗಿ ಚರಂಡಿಯೊಳಗೆ ಬಿದ್ದು ಸಾವನ್ನಪ್ಪಿ ಅತಿಯಾದ ಮಳೆಯಾಗಿದ್ದರಿಂದ ನೀರಿನ ರಭಸಕ್ಕೆ ಕೊಚ್ಚಿ ಹೋಗಿದ್ದಾನೆ ಎಂದು ಪೊಲೀಸರು ಶಂಕಿಸಿದ್ದಾರೆ.
ಹಾಸನ: ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಾಸನ ಜಿಲ್ಲಾ ಜನರ ದೈನಂದಿನ ಜೀವನದ ಮೇಲೆ ಪರಿಣಾಮ ಬೀರಿದೆ. ಅರಸೀಕರೆ, ಚನ್ನರಾಯಪಟ್ಟಣ ಸೇರಿದಂತೆ ಹಲವು ತಾಲೂಕುಗಳಲ್ಲಿ ಉತ್ತಮ ಮಳೆಯಾಗಿದೆ. ಮಳೆಯಿಂದಾಗಿ ಹಾಸನದ ಎಂಜಿ ರಸ್ತೆಯಲ್ಲಿ ಬೃಹತ್ ಮರವೊಂದು ಉರುಳಿಬಿದ್ದು, ಸಂಚಾರ ಅಸ್ತವ್ಯಸ್ತ ಗೊಂಡಿತ್ತು. ಹೇಮಾವತಿ ಜಲಾಶಯದಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. 
ಕಬಿನಿ, ಕೆಆರ್ ಎಸ್ ಜಲಾಶಯಗಳ ಒಳಹರಿವಿನ ಪ್ರಮಾಣದಲ್ಲಿ ಏರಿಕೆ
ಮೈಸೂರು: ಕೇರಳದ ವೈನಾಡು ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಕಬಿನಿ ಜಲಾಶಯದಲ್ಲಿ ನೀರಿನ ಒಳಹರಿವಿನ ಪ್ರಮಾಣದಲ್ಲಿ ಏರಿಕೆಯಾಗಿದೆ. 13,500 ಕ್ಯೂಸೆಕ್ಸ್ ಒಳಹರಿವು ಹೆಚ್ಚಿದೆ. ಕಳೆದ 24 ಗಂಟೆಗಳಲ್ಲಿ ಕೆಆರ್ ಎಸ್ ಜಲಾಶಯದ ಒಳಹರಿವಿನ ಪ್ರಮಾಣ 3,336 ಕ್ಯೂಸೆಕ್ಸ್ ಗೆ ಏರಿದೆ. 

Related Stories

No stories found.

Advertisement

X
Kannada Prabha
www.kannadaprabha.com