ಬೆಂಗಳೂರು: 6ನೇ ತರಗತಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ, ಅಪ್ರಾಪ್ತ ಬಾಲಕರ ಬಂಧನ

11 ವರ್ಷದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ 14 ವರ್ಷದ ಬಾಲಕನನ್ನು ಪೊಲೀಸರು ಬಂಧಿಸಿದ್ದಾರೆ...
ಲೈಂಗಿಕ ಕಿರುಕುಳ(ಸಂಗ್ರಹ ಚಿತ್ರ)
ಲೈಂಗಿಕ ಕಿರುಕುಳ(ಸಂಗ್ರಹ ಚಿತ್ರ)
ಬೆಂಗಳೂರು: 11 ವರ್ಷದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ 14 ವರ್ಷದ ಬಾಲಕನನ್ನು ಪೊಲೀಸರು ಬಂಧಿಸಿದ್ದಾರೆ. 
ಜುಲೈ 10 ಈ ಘಟನೆ ನಡೆದಿದ್ದು ಮೂವರು ಅಪ್ರಾಪ್ತ ಬಾಲಕರನ್ನು ಬುಧವಾರ ಪೊಲೀಸರು ಬಂಧಿಸಿದ ನಂತರ ಪ್ರಕರಣ ಬೆಳಕಿಗೆ ಬಂದಿದೆ. ಪ್ರಕರಣದ ಪ್ರಮುಖ ಆರೋಪಿಯನ್ನು ಹುಬ್ಬಳ್ಳಿಯಲ್ಲಿ ಬಂಧಿಸಲಾಗಿದೆ. ಇನ್ನು ಆರೋಪಿಗಳು 14 ಮತ್ತು 16 ವರ್ಷದವರಾಗಿದ್ದು ಇವರೆಲ್ಲಾ ರಾಮಮೂರ್ತಿನಗರದ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಎಂದು ಪೊಲೀಸರು ತಿಳಿಸಿದ್ದಾರೆ. 
ಸರ್ಕಾರಿ ಶಾಲೆಯಲ್ಲಿ 6ನೇ ತರಗತಿಯಲ್ಲಿ ಓದುತ್ತಿದ್ದ 11 ವರ್ಷದ ವಿದ್ಯಾರ್ಥಿನಿ ಜುಲೈ 10ರಂದು ನಾಲ್ಕು ಗಂಟೆ ಸುಮಾರಿಗೆ ಶಾಲೆ ಮುಗಿಸಿಕೊಂಡು ಮನೆಗೆ ಬರುತ್ತಿದ್ದಾಗ ಆರು ಬಾಲಕರು ಆಕೆಯನ್ನು ವಿಜಿನಪುರದ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಲೈಂಗಿಕ ಕಿರುಕುಳ ನೀಡಿದ್ದಾರೆ. 
ನಂತರ ಮನೆಗೆ ಬಂದ ಬಾಲಕಿ ನಡೆದ ವಿಷಯವನ್ನು ಪೋಷಕರಿಗೆ ತಿಳಿಸಿದ್ದಾಳೆ. ಬಾಲಕಿ ತಾಯಿ ಪೊಲೀಸರಿಗೆ ದೂರು ನೀಡಿದ್ದು ಪ್ರಕರಣ ಸಂಬಂಧ ಮೂವರನ್ನು ಬಂಧಿಸಿರುವ ಪೊಲೀಸರು ಅವರನ್ನು ಬಾಲಾಪರಾಧಿ ಬಂಧಿಖಾನೆಗೆ ಕಳುಹಿಸಲಾಗಿದ್ದು ಇನ್ನು ಇಬ್ಬರು ಆರೋಪಿಗಳು ತಲೆ ಮರೆಸಿಕೊಂಡಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com