ಹರ್ಮನ್ ಪ್ರೀತ್ ಕೌರ್ ಗೆ ಸ್ಪಿನ್ ಬೌಲಿಂಗ್ ಬೇಡ: ಇಂಗ್ಲೆಂಡ್ ಗೆ ಮಾಜಿ ನಾಯಕ ನಾಸಿರ್ ಹುಸೇನ್ ಸಲಹೆ

ಇಂಗ್ಲೆಂಡ್ ಮಹಿಳಾ ಕ್ರಿಕೆಟ್ ತಂಡ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಗೆಲುವು ಸಾಧಿಸಿಲು ಭಾರತ ಹರ್ಮನ್ ಪ್ರೀತ್ ಕೌರ್ ಅವರನ್ನು ನಿಯಂತ್ರಿಸಲೇ ಬೇಕಿದೆ ಎಂದು ಇಂಗ್ಲೆಂಡ್ ತಂಡದ ಮಾಜಿ ನಾಯಕ ನಾಸಿರ್ ಹುಸೇನ್ ಹೇಳಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಲಂಡನ್: ಇಂಗ್ಲೆಂಡ್ ಮಹಿಳಾ ಕ್ರಿಕೆಟ್ ತಂಡ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಗೆಲುವು ಸಾಧಿಸಿಲು ಭಾರತ ಹರ್ಮನ್ ಪ್ರೀತ್ ಕೌರ್ ಅವರನ್ನು ನಿಯಂತ್ರಿಸಲೇ ಬೇಕಿದೆ ಎಂದು ಇಂಗ್ಲೆಂಡ್ ತಂಡದ ಮಾಜಿ ನಾಯಕ ನಾಸಿರ್ ಹುಸೇನ್  ಹೇಳಿದ್ದಾರೆ.

ಇಂದು ಮಧ್ಯಾಹ್ನ ಕ್ರಿಕೆಟ್ ಕಾಶಿ ಇಂಗ್ಲೆಂಡ್ ನ ಲಾರ್ಡ್ಸ್ ಮೈದಾನದಲ್ಲಿ ನಡೆಯಲಿರುವ ಭಾರತ ಮತ್ತು ಇಂಗ್ಲೆಂಡ್ ನಡುವಿನ ವಿಶ್ವಕಪ್ ಫೈನಲ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿರುವಂತೆಯೇ ಉಭಯ ತಂಡಗಳಲ್ಲಿ ಗೆಲುವಿನ  ಲೆಕ್ಕಾಚಾರ ಆರಂಭವಾಗಿದ್ದು, ಇಂಗ್ಲೆಂಡ್ ತಂಡವೇ ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡ ಎಂದು ಇಂಗ್ಲೆಂಡ್ ತಂಡದ ಮಾಜಿ ನಾಯಕ ನಾಸಿರ್ ಹುಸೇನ್ ಹೇಳಿದ್ದಾರೆ. ಅಂತೆಯೇ ಇಂಗ್ಲೆಂಡ್ ಮಹಿಳಾ ತಂಡಕ್ಕೆ ಶುಭ ಹಾರೈಸಿರುವ  ಹುಸೇನ್, ತಂಡದ ಗೆಲುವಿಗಾಗಿ ಒಂದಷ್ಟು ಟಿಪ್ಸ್ ಗಳನ್ನು ಕೂಡ ನೀಡಿದ್ದಾರೆ.

ಅದರಂತೆ ಇಂಗ್ಲೆಂಡ್ ತಂಡ ಯಾವುದೇ ಕಾರಣಕ್ಕೂ ಭಾರತದ ಹರ್ಮನ್ ಪ್ರೀತ್ ಕೌರ್ ಅವರ ವಿರುದ್ಧ ಬೌಲ್ ಮಾಡಲು ಸ್ಪಿನ್ನರ್ ಗಳನ್ನು ಆಯ್ಕೆ ಮಾಡಿಕೊಳ್ಳಬಾರದು ಎಂದು ಸಲಹೆ ನೀಡಿದ್ದಾರೆ. ಈ ಹಿಂದೆ ಇದೇ ಕೌರ್  ಆಸ್ಟ್ರೇಲಿಯಾ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ಕೇವಲ 115 ಎಸೆತಗಳಲ್ಲಿ 171 ರನ್ ಸಿಡಿಸಿದ್ದರು. ಪ್ರಮುಖವಾಗಿ ಆಸಿಸ್ ಸ್ಪಿನ್ನರ್ ಗಳ ವಿರುದ್ಧ ಕೌರ್ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದ್ದರು. ಹೀಗಾಗಿ ಇಂಗ್ಲೆಂಡ್ ತಂಡ  ಕೌರ್ ವಿರುದ್ಧ ಸ್ಪಿನ್ ಆಯ್ಕೆ ಇಟ್ಟುಕೊಳ್ಳಬಾರದು ಎಂದು ಸಲಹೆ ನೀಡಿದ್ದಾರೆ.

ಇಡೀ ಟೂರ್ನಿಯಲ್ಲಿ ಭಾರತ ತಂಡವೊಂದೇ ಇಂಗ್ಲೆಂಡ್ ತಂಡವನ್ನು ಮಣಿಸಿರುವುದು. ಹೀಗಾಗಿ ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ತೀರಾ ಕಟ್ಟೆಚ್ಚರದಿಂದ ಆಡಬೇಕಿದೆ. ಕೌರ್ ಹೊರತಾಗಿಯೂ ತಂಡದ ಪರ ಉತ್ತಮ ರನ್  ಕಲೆಹಾಕುವ ಆಟಗಾರ್ತಿಯರು ಭಾರತ ತಂಡದಲ್ಲಿದ್ದಾರೆ. ಪ್ರಮುಖವಾಗಿ ನಾಯಕಿ ಮಿಥಾಲಿ ರಾಜ್ ಹಾಗೂ ಸ್ಮೃತಿ ಮಂದಾನ ಉತ್ತಮ ಫಾರ್ಮ್ ನಲ್ಲಿದ್ದಾರೆ. ಹೀಗಾಗಿ ಇಂಗ್ಲೆಂಡ್ ತಂಡ ಅತ್ಯುತ್ತಮ ಪ್ರದರ್ಶನ ತೋರದ ಹೊರತು  ಗೆಲುವು ಅಸಾಧ್ಯ ಎಂದು ಹುಸೇನ್ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com