ರೈತರ ವಿರೋಧದ ನಡುವೆಯೂ ಕಬಿನಿಯಿಂದ ತಮಿಳುನಾಡಿಗೆ ಹೆಚ್ಚುವರಿ ನೀರು ಬಿಡುಗಡೆ

ರೈತರ ತೀವ್ರ ವಿರೋಧದ ನಡುವೆಯೂ ನೀರಾವರಿ ಇಲಾಖೆ ಕಬಿನಿ ಜಲಾಶಯದಿಂದ ತಮಿಳುನಾಡಿಗೆ ಹೆಚ್ಚುವರಿ ನೀರು ಬಿಡುತ್ತಿರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ...
ಕಬಿನಿ ಜಲಾಶಯ
ಕಬಿನಿ ಜಲಾಶಯ
ಮೈಸೂರು: ರೈತರ ತೀವ್ರ ವಿರೋಧದ ನಡುವೆಯೂ ನೀರಾವರಿ ಇಲಾಖೆ ಕಬಿನಿ ಜಲಾಶಯದಿಂದ ತಮಿಳುನಾಡಿಗೆ ಹೆಚ್ಚುವರಿ ನೀರು ಬಿಡುತ್ತಿರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ. 
ಕೊಡಗಿನಲ್ಲಿ ಕಳೆದ ವಾರದಿಂದ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಬಿನಿ ಜಲಾಶಯದ ಒಳಹರಿವು ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕಬಿನಿ ಜಲಾಶಯದಿಂದ ತಮಿಳುನಾಡಿಗೆ 1 ಸಾವಿರ ಕ್ಯೂಸೆಕ್ಸ್ ಬದಲಿಗೆ 6 ಸಾವಿರ ಕ್ಯೂಸೆಕ್ಸ್ ನೀರು ಬಿಡುತ್ತಿದೆ. 
ಕಬಿನಿ ಜಲಾಶಯದ ನೀರಿನ ಮಟ್ಟ 2,284 ಅಡಿ ಇದ್ದು ಭಾನುವಾರ ಜಲಾಶಯದ ನೀರಿನ ಮಟ್ಟ 2,274 ಅಡಿಗೆ ತಲುಪಿದೆ. ಜಲಾಶಯ ತುಂಬಲು ಇನ್ನು 10 ಅಡಿ ಮಾತ್ರ ಬಾಕಿ ಇದೆ. 
ತಮಿಳುನಾಡು ಸರ್ಕಾರ ಸುಪ್ರೀಂಕೋರ್ಟ್ ನಲ್ಲಿ 52 ಟಿಎಂಸಿ ನೀಡು ಬಿಡುವಂತೆ ಕರ್ನಾಟಕ ಸರ್ಕಾರಕ್ಕೆ ಸೂಚಿಸಿಬೇಕು ಎಂದು ಮನವಿ ಮಾಡಿತ್ತು. ಕಾವೇರಿ ನದಿ ನೀರು ಹಂಚಿಕೆ ಕುರಿತಂತೆ ಇನ್ನು ಅಂತಿಮ ಆದೇಶ ಹೊರಬರುವ ಮುನ್ನವೇ ರಾಜ್ಯ ಸರ್ಕಾರ ನೀರನ್ನು ಬಿಡುಗಡೆ ಮಾಡುತ್ತಿದೆ. 
ಇನ್ನು ಮಹಾರಾಷ್ಟ್ರದಲ್ಲೂ ಭರ್ಜರಿ ಮಳೆಯಾಗುತ್ತಿರುವುದರಿಂದ ಕೃಷ್ಣ ನದಿಯು ಉಕ್ಕಿ ಹರಿಯುತ್ತಿದೆ. ದೂದ್ ಗಂಗಾ, ವೇದಗಂಗಾ ಮತ್ತು ಕೃಷ್ಣ ನದಿಯ ಒಳಹರಿವು ಹೆಚ್ಚಾಗಿದೆ. ಈ ಹಿನ್ನಲೆಯಲ್ಲಿ ಕೃಷ್ಣ ನದಿಯ ಪಾತ್ರದ ರೈತರ ಮೊಗದಲ್ಲಿ ಸಂತಸ ಮನೆ ಮಾಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com