ಶಿವಮೊಗ್ಗ: ಮೊರಾರ್ಜಿ ದೇಸಾಯಿ ವಸತಿನಿಲಯದಲ್ಲಿ ಊಟ ಸೇವಿಸಿದ 24 ಮಕ್ಕಳು ಅಸ್ವಸ್ಥ

ಗಾಜನೂರಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಊಟ ಸೇವಿಸಿದ 24 ಮಕ್ಕಳು ಅಸ್ವಸ್ಥಗೊಂಡು ಆಸ್ಪತ್ರೆಗೆ ...
ಆಸ್ಪತ್ರೆಗೆ ಭೇಟಿ ನೀಡಿದ ಮಾಜಿ ಸಚಿವ ಕಿಮ್ಮನೆ ರತ್ನಾಕರ್
ಆಸ್ಪತ್ರೆಗೆ ಭೇಟಿ ನೀಡಿದ ಮಾಜಿ ಸಚಿವ ಕಿಮ್ಮನೆ ರತ್ನಾಕರ್
ಶಿವಮೊಗ್ಗ:  ಗಾಜನೂರಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಊಟ ಸೇವಿಸಿದ 24 ಮಕ್ಕಳು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಭಾನುವಾರ ರಾತ್ರಿ ಸುಮಾರು 8 ಗಂಟೆಗೆ ಊಟ ಮಾಡಿದ ಮಕ್ಕಳು ರಾತ್ರಿ ಗಂಟೆಗೆ ವಾಂತಿ ಮಾಡಿಕೊಳ್ಳಲು ಆರಂಭಿಸಿದ್ದಾರೆ. ಅಸ್ವಸ್ಥಗೊಂಡ ಮಕ್ಕಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಷಾಹಾರ ಸೇವನೆಯಿಂದ ಮಕ್ಕಳು ಅಸ್ವಸ್ಥಗೊಂಡಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ.
ವಸತಿ ನಿಲಯದಲ್ಲಿ 300 ವಿದ್ಯಾರ್ಥಿಗಳಿದ್ದಾರೆ, ಅದರಲ್ಲಿ 5,6, ಮತ್ತು 7 ನೇತರಗತಿಯ 24 ಮಕ್ಕಳು ಮಾತ್ರ ಅಸ್ವಸ್ಥಗೊಂಡಿದ್ದಾರೆ. ಈ ಮಕ್ಕಳು ಅವರ ಪೋಷಕರು ತಂದು ಕೊಟ್ಟಿದ್ದ ಆಹಾರ ಸೇವಿಸಿದ್ದೇ ಕಾರಣ ಎಂದು ಶಾಲೆಯ ಪ್ರಿನ್ಸಿಪಾಲ್ ಕೆ. ಆರ್ ನಾಯಕ್ ಆರೋಪಿಸಿದ್ದಾರೆ.
ಮಕ್ಕಳಿಗೆ ಕೇವಲ ಬಿಸ್ಕಟ್ಸ್ ಮಾತ್ರ ತಂದು ಕೊಟ್ಟಿದ್ದೆವು ಎಂದು ಮಕ್ಕಳ ಪೋಷಕರು ಹೇಳಿದ್ದಾರೆ. ಮಕ್ಕಳು ಅಸ್ವಸ್ಥಗೊಂಡಿರುವ ಬಗ್ಗೆ ಶಾಲೆಯ ಪ್ರಾಂಶುಪಾಲರು ನಮಗೆ ಮಾಹಿತಿ ನೀಡಲಿಲ್ಲ, ಟಿವಿ ಚಾನೆಲ್ ಗಳಲ್ಲಿ ವರದಿ ಪ್ರಸಾರವಾದ ನಂತರ ಬೆಳಗ್ಗೆ 11 ಗಂಟೆಗೆ ನಾವು ಆಸ್ಪತ್ರೆಗೆ ಬಂದೆವು ಎಂದು ಪೋಷಕಪು ದೂರಿದ್ದಾರೆ.
ಸಂಜೆ 4 ಗಂಟೆಯಲ್ಲಿ ಗೀ ರೈಸ್ ತಿಂದ ಮೇಲೆ ವಾಕರಿಕೆ ಬರುವಂತಾಯಿತು.ರಾತ್ರಿ ಊಟವಾದ ಮೇಲೂ ಹಲವರಿಗೆ ವಾಂತಿಯಾಗಿದೆ ಎಂದು ಕೆಲ ವಿದ್ಯಾರ್ಥಿಗಳು ಹೇಳಿದ್ದಾರೆ.
ಸ್ಥಳೀಯ ಶಾಸಕ ಹಾಗೂ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಆಸ್ಪತ್ರೆಗೆ ಭೇಟಿ ನೀಡಿ ಮಕ್ಕಳ ಆರೋಗ್ಯದ ಬಗ್ಗೆ ವಿಚಾರಿಸಿದರು. ವಸತಿ ನಿಲಯದಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯತೆ ಕಂಡು ಬಂದರೆ ಶಿಸ್ತು ಕ್ರಮ ಕೈಗೊಂಡು ಇಲಾಖಾ ತನಿಖೆ ನಡೆಸಲಾಗುವುದು ಎಂದು ಎಚ್ಚರಿಸಿದ್ದಾರೆ.ಅಡುಗೆಗೆ ಬಳಸಿದ ಎಣ್ಣೆ ಮತ್ತು ನೀರಿನ ಗುಣ ಮಟ್ಟ ಪರೀಕ್ಷೆ ನಡೆಸಬೇಕು ಎಂದು ಅವರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com