ರಾಮಮಂದಿರ ನಿರ್ಮಾಣ: ತಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆಯಿಲ್ಲ; ವಿಶ್ವೇಶ ತೀರ್ಥ ಸ್ವಾಮೀಜಿ

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮಾಡುವ ವಿಚಾರ ಸಂಬಂಧ ತಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆಯಿಲ್ಲ ಎಂದು ಉಡುಪಿ ಪೇಜಾವರ ಮಠದ ...
ವಿಶ್ವೇಶ ತೀರ್ಥ ಸ್ವಾಮೀಜಿ
ವಿಶ್ವೇಶ ತೀರ್ಥ ಸ್ವಾಮೀಜಿ
ಉಡುಪಿ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮಾಡುವ ವಿಚಾರ ಸಂಬಂಧ ತಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆಯಿಲ್ಲ ಎಂದು ಉಡುಪಿ ಪೇಜಾವರ  ಮಠದ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಹೇಳಿದ್ದಾರೆ.
ಶ್ರೀಕೃಷ್ಣ ಮಠದಲ್ಲಿ  ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಮ ಮಂದಿರ ನಿರ್ಮಾಣ ವಿಚಾರದಲ್ಲಿ ನಾನು ಹೋರಾಟ ಬಿಟ್ಟು ಶಾಂತಿ ಮಾತುಕತೆ ಮೂಲಕ ಬಗೆ ಹರಿಸಿಕೊಳ್ಳಬೇಕೆಂದು ಕೆಲ ಬುದ್ದಿಜೀವಿಗಳು ನನ್ನ ಮುಂದೆ ಬೇಡಿಕೆ ಇಟ್ಟಿದ್ದಾರೆ. ಆದರೆ ಸಾಮರಸ್ಯದಿಂದ ಹೊಂದಾಣಿಕೆ ಮಾಡಿಕೊಂಡು ಹೋಗುವ ಸ್ವಭಾವವನ್ನು ಶರಣಾಗತಿ ಎಂದು ಭಾವಿಸಬಾರದು ಎಂದು ಅವರು ಹೇಳಿದ್ದಾರೆ.
ನಮ್ಮ ತತ್ವ ಸಿದ್ಧಾಂತಗಳನ್ನು ಒಪ್ಪಿಕೊಳ್ಳುವವರ ಜೊತೆ ನಾವು ಸಾಮರಸ್ಯದಿಂದ ಇರುತ್ತೇವೆ, ರಾಮ ಮಂದಿರ ಧ್ವಂಸಗೊಳಿಸುವಾಗ ನಾನು ಭಾಗವಹಿಸಿರಲಿಲ್ಲ, ಅಥವಾ ಯಾರನ್ನು ಅದಕ್ಕಾಗಿ ಪ್ರಚೋದಿಸಿರಲಿಲ್ಲ. ಈ ಮೊದಲೇ ಅಲ್ಲಿ ರಾಮ ಮಂದಿರ ನಿರ್ಮಾಣವಾಗಿತ್ತು. ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮಾಡುವುದು ಎಲ್ಲಾ ಹಿಂದೂಗಳ ಒಕ್ಕೊರಲ ಒತ್ತಾಯವಾಗಿದೆ. ಪಿ.ವಿ ನರಸಿಂಹ ರಾವ್ ಮತ್ತು ವಿ.ಪಿ ಸಿಂಗ್ ಪ್ರಧಾನಿಯಾಗಿದ್ದ ಅವಧಿಯಲ್ಲಿ ರಾಮಮಂದಿರ ವಿವಾದವನ್ನು ಬಗೆಹರಿಸಲು ಪ್ರಯತ್ನಿಸಿದ್ದೆ  ಎಂದು ಶ್ರೀಗಳು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com