ಎನ್. ಧರಂಸಿಂಗ್
ರಾಜ್ಯ
ಮಾಜಿ ಮುಖ್ಯಮಂತ್ರಿ ಎನ್. ಧರಂಸಿಂಗ್ ಇನ್ನಿಲ್ಲ!
ಮಾಜಿ ಮುಖ್ಯಮಂತ್ರಿ ಎನ್. ಧರಂಸಿಂಗ್ (80) ಸಾವನ್ನಪ್ಪಿದ್ದಾರೆ. ಬೆಂಗಳೂರಿನ ಎಂ.ಎಸ್ ರಾಮಯ್ಯ ಆಸ್ಪತ್ರೆಯಲ್ಲಿ ...
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎನ್. ಧರಂಸಿಂಗ್ (80) ಸಾವನ್ನಪ್ಪಿದ್ದಾರೆ. ಬೆಂಗಳೂರಿನ ಎಂ.ಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ.
ಇಂದು ಬೆಳಗ್ಗೆ ಧರಂಸಿಂಗ್ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು, ಕೂಡಲೇ ಅವರನ್ನು ಎಂ.ಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಯಿತು. ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ.
2004 ರಿಂದ 2006 ರವರೆಗೆ ಧರಂಸಿಂಗ್ ಮುಖ್ಯಮಂತ್ರಿಯಾಗಿದ್ದರು. 1936ರ ಡಿಸೆಂಬರ್ 25 ರಂದು ಕಲಬುರಗಿಯ ಜೇವರ್ಗಿಯ ನೆಲೋಗಿ ಎಂಬ ಗ್ರಾಮದಲ್ಲಿ ಜನಿಸಿದ್ದ ಧರ್ಮಸಿಂಗ್ ಕರ್ನಾಟಕದ 17ನೇ ಮುಖ್ಯಮಂತ್ರಿಯಾಗಿದ್ದರು.
ಜೇವರ್ಗಿ ವಿಧಾನಸಭೆ ಕ್ಷೇತ್ರದಿಂದ 7 ಬಾರಿ ಶಾಸಕ ಹಾಗೂ 1 ಬಾರಿ ಸಂಸದರಾಗಿ ಧರಂಸಿಂಗ್ ಆಯ್ಕೆಯಾಗಿದ್ದರು.ಜೆಡಿಎಸ್ -ಕಾಂಗ್ರೆಸ್ ಮೈತ್ರಿ ಸರ್ಕಾರದಲ್ಲಿ 2004 ಮೇ 28 ರಿಂದ 2006 ರ ಫೆಬ್ರವರಿ 3 ರವರೆಗೆ ಸಿಎಂ ಆಗಿ ಕಾರ್ಯ ನಿರ್ವಹಿಸಿದ್ದರು.
ಮಾಜಿ ಮುಖ್ಯಮಂತ್ರಿ ಧರಂಸಿಂಗ್ ಅವರ ಅಂತ್ಯಕ್ರಿಯೆ ನಾಳೆ ಕಲಬುರಗಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಲಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ