ಮುಖ್ಯಮಂತ್ರಿಯವರು ತಮ್ಮ ಪತ್ರದಲ್ಲಿ, ಪರಿಷ್ಕೃತ ಕೈಪಿಡಿ ಪ್ರಕಾರ, ತೀವ್ರ ಬರಗಾಲ ಪೀಡಿತ ತಾಲ್ಲೂಕುಗಳಿಗೆ ಮಾತ್ರ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯಿಂದ ಪರಿಹಾರ ನೀಡಲಾಗುತ್ತದೆ. ಈ ನಿಯಮ ಮಾಡಿದರೆ ಬರಗಾಲಕ್ಕೆ ಅಪಾರ ಬೆಳೆ ನಷ್ಟ ಮಾಡಿಕೊಂಡಿರುವ ಸಣ್ಣ ಮತ್ತು ಮಧ್ಯಮ ಗಾತ್ರದ ರೈತರಿಗೆ ಬೆಳೆ ನಷ್ಟಕ್ಕೆ ಸಬ್ಸಿಡಿ ಸಿಗುವುದಿಲ್ಲ ಎಂದು ವಿವರಿಸಿದ್ದಾರೆ.