ಮುಖ್ಯಮಂತ್ರಿ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ

ಲಿಂಗಾಯತ ಧರ್ಮ ವಿವಾದ: ಇದರಲ್ಲಿ ಸರ್ಕಾರದ ಪಾತ್ರವಿಲ್ಲ- ಮುಖ್ಯಮಂತ್ರಿ ಸಿದ್ದರಾಮಯ್ಯ

ಲಿಂಗಾಯತರಿಗೆ ಪ್ರತ್ಯೇಕ ಧಾರ್ಮಿಕ ಸ್ಥಾನಮಾನ ನೀಡಬೇಕೆಂಬ ಒತ್ತಾಯದ ಹಿಂದೆ ರಾಜ್ಯ ಸರ್ಕಾರದ...
ಹುಬ್ಬಳ್ಳಿ: ಲಿಂಗಾಯತರಿಗೆ ಪ್ರತ್ಯೇಕ ಧಾರ್ಮಿಕ ಸ್ಥಾನಮಾನ ನೀಡಬೇಕೆಂಬ ಒತ್ತಾಯದ ಹಿಂದೆ ರಾಜ್ಯ ಸರ್ಕಾರದ ಪಾತ್ರವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. 
ಹುಬ್ಬಳ್ಳಿಯಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಿಂಗಾಯಿತರಿಗೆ ಪ್ರತ್ಯೇಕ ಧಾರ್ಮಿಕ ಸ್ಥಾನಮಾನ ನೀಡುವ ವಿಷಯದಲ್ಲಿ ಕೆಲವರು ಪರವಾಗಿದ್ದರೆ, ಇನ್ನು ಕೆಲವರು ವಿರುದ್ಧವಾಗಿದ್ದಾರೆ. ಸರ್ಕಾರ ಎರಡೂ ಕಡೆಯವರ ಅಭಿಪ್ರಾಯಗಳನ್ನು ತೆಗೆದುಕೊಂಡು ಕಾನೂನು ಮತ್ತು ಸಾಂವಿಧಾನಿಕ ನಿಯಮಗಳನ್ನು  ನೋಡಿಕೊಂಡು ಕಾನೂನು ಸಚಿವಾಲಯ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದರು. 
ಸಮುದಾಯದರ ಅಭಿಪ್ರಾಯಗಳನ್ನು ಸಂಗ್ರಹಿಸಲು ಸರ್ಕಾರ ಐವರು ಲಿಂಗಾಯತ ಸಚವರುಗಳ ತಂಡವನ್ನು ರಚಿಸಲಿದೆ ಎಂಬ ಮಾಧ್ಯಮ ವರದಿಗಳನ್ನು ಮುಖ್ಯಮಂತ್ರಿ ಇದೇ ಸಂದರ್ಭದಲ್ಲಿ ತಳ್ಳಿ ಹಾಕಿದರು.
ಬಿಹಾರದಲ್ಲಿನ ರಾಜಕೀಯ ಬೆಳವಣಿಗೆಗಳ ಕುರಿತು ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ, ಜೆಡಿಯು ಮುಖ್ಯಸ್ಥ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಅವಕಾಶವಾದಿಯಾಗಿದ್ದು, ಬಿಹಾರ ಜನತೆಯ ಆದೇಶಕ್ಕೆ ದ್ರೋಹ ಬಗೆದಿದ್ದಾರೆ ಎಂದರು.
ಮುಂದಿನ ವರ್ಷದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಬೇರೆ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುವುದನ್ನು ನಿರಾಕರಿಸಿದ ಮುಖ್ಯಮಂತ್ರಿ, ಸರ್ಕಾರ ರಚಿಸಲು ಕಾಂಗ್ರೆಸ್ ಸಮರ್ಥವಾಗಿದೆ ಎಂದು ಹೇಳಿದರು.

Related Stories

No stories found.

Advertisement

X
Kannada Prabha
www.kannadaprabha.com