ಅರ್ಜಿದಾರರ ಪರ ವಾದ ಮಂಡಿಸಿದ ಪುತ್ತಿಗೆ ರಮೇಶ್, ಕನ್ನಡದಲ್ಲಿ ಒಂದು ಗಾದೆಯಿದೆ, ದೇವರು ಕೊಟ್ಟರೂ, ಪೂಜಾರಿ ಕೊಡಲಿಲ್ಲ ಎಂಬಂತೆ ಸರ್ಕಾರ, ಆಟೋ ಚಾಲಕರಿಗೆ ಎಲ್ಲಾ ರೀತಿಯ ಸವಲತ್ತು ನೀಡುವುದಾಗಿ ಘೋಷಿಸಿದೆ. ಆಟೋ ಚಾಲಕರು ಸಾಲದ ಸುಳಿಗೆ ಸಿಲುಕಿ ತೊಂದರೆ ಅನುಭವಿಸಬಾರದೆಂಬ ಉದ್ದೇಶದಿಂದ ಸರ್ಕಾರ ಹಲವು ಸೌಲಭ್ಯಗಳನ್ನು ಘೋಷಿಸಿದೆ. ಆದರೆ ಅದನ್ನು ಅನುಷ್ಠಾನಗೊಳಿಸಲು ಸಂಬಂಧಪಟ್ಟ ಪ್ರಾಧಿಕಾರ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಹೇಳಿದ್ದಾರೆ.