ಬೆಂಗಳೂರು: ಉದ್ಯೋಗ ಭದ್ರತೆಗೆ ಆಗ್ರಹಿಸಿ ಐಟಿ ಉದ್ಯೋಗಿಗಳಿಂದ ಪ್ರತಿಭಟನೆ

ಉದ್ಯೋಗ ಭದ್ರತೆಗೆ ಆಗ್ರಹಿಸಿ ನಗರದ ಪ್ರತಿಷ್ಠಿತ ಐಟಿ ಕಂಪನಿಗಳಲ್ಲಿ ಕೆಲಸ ಮಾಡುತ್ತಿರುವ ಮತ್ತು ಕೆಲಸ ಕಳೆದುಕೊಂಡ ನೂರಾರು ಮಂದಿ....
ಪ್ರತಿಭಟನಾಕಾರರು
ಪ್ರತಿಭಟನಾಕಾರರು
ಬೆಂಗಳೂರು: ಉದ್ಯೋಗ ಭದ್ರತೆಗೆ ಆಗ್ರಹಿಸಿ ನಗರದ ಪ್ರತಿಷ್ಠಿತ ಐಟಿ ಕಂಪನಿಗಳಲ್ಲಿ ಕೆಲಸ ಮಾಡುತ್ತಿರುವ ಮತ್ತು ಕೆಲಸ ಕಳೆದುಕೊಂಡ ನೂರಾರು ಮಂದಿ ಶನಿವಾರ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಿದರು.
ಐಟಿ ಕಂಪನಿಗಳು ಒತ್ತಾಯಪೂರ್ವಕವಾಗಿ ರಾಜಿನಾಮೆ ಪಡೆಯುತ್ತಿರುವುದನ್ನು ಖಂಡಿಸಿ ಮಾಹಿತಿ ತಂತ್ರಜ್ಞಾನ ಉದ್ಯೋಗಿಗಳ ಒಕ್ಕೂಟ(ಐಟಿಇಯು) ಇಂದು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ.
ಕಾನೂನು ಬಾಹಿರವಾಗಿ ಸಾಮೂಹಿಕವಾಗಿ ಉದ್ಯೋಗದಿಂದ ತೆಗೆದು ಹಾಕುವುದನ್ನು ನಿಲ್ಲಿಸಬೇಕು ಮತ್ತು ರಾಜ್ಯ ಸರ್ಕಾರ ಐಟಿ ಕ್ಷೇತ್ರದಲ್ಲೂ ಕಡ್ಡಾಯವಾಗಿ ಕಾರ್ಮಿಕ ಕಾನೂನುನ್ನು ಜಾರಿಗೊಳಿಸಬೇಕು ಎಂದು ಐಟಿ ಉದ್ಯೋಗಿಗಳು ಒತ್ತಾಯಿಸಿದ್ದಾರೆ.
ಈ ವೇಳೆ ಇಂಡಿಯನ್ ಎಕ್ಸ್ ಪ್ರೆಸ್ ನೊಂದಿಗೆ ಮಾತನಾಡಿದ ಪ್ರತಿಭಟನಾನಿರತ ವಿಪ್ರೋ ಕಂಪನಿಯ ಉದ್ಯೋಗಿಯೊಬ್ಬರು, ನನಗೆ ಯಾವುದೇ ಸಂದರ್ಭದಲ್ಲೂ ರಾಜಿನಾಮೆ ನೀಡುವಂತೆ ಕಂಪನಿಯ ಎಚ್ ಆರ್ ಯಿಂದ ಕರೆ ಬರಬಹುದು ಎಂದರು.
ಐಟಿ ಕ್ಷೇತ್ರದಲ್ಲಿ ಸಾಮೂಹಿಕ ಉದ್ಯೋಗ ಕಡಿತವನ್ನು ತಪ್ಪಿಸಲು ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರಿಗೆ ಮನವಿ ಸಲ್ಲಿಸಿದ್ದೇವೆ ಎಂದು ಐಟಿಇಯು ಅಧ್ಯಕ್ಷ ಕುಮಾರಸ್ವಾಮಿ ಎಸಿ ಅವರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com