ರಾಜ್ಯ ಸರ್ಕಾರಿ ಪದವಿ ಕಾಲೇಜುಗಳ ವೇಳಾಪಟ್ಟಿ ಮತ್ತೆ ಬದಲು: ಶಿಕ್ಷಣ ಇಲಾಖೆ ಹೊಸ ಸುತ್ತೋಲೆ

ರಾಜ್ಯ ಸರ್ಕಾರಿ ಪದವಿ ಕಾಲೇಜುಗಳ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಿ ಶಿಕ್ಷಣ ಇಲಾಖೆ ಹೊಸ ಸುತ್ತೊಲೆ ಹೊರಡಿಸಿಜೆ. ಅದರ ಪ್ರಕಾರ ಆಗಸ್ಟ್ 1 ರಿಂದ ಬೆಳಗ್ಗೆ 9 ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಬೆಂಗಳೂರು: ರಾಜ್ಯ ಸರ್ಕಾರಿ ಪದವಿ ಕಾಲೇಜುಗಳ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಿ ಶಿಕ್ಷಣ ಇಲಾಖೆ ಹೊಸ ಸುತ್ತೊಲೆ ಹೊರಡಿಸಿಜೆ. ಅದರ ಪ್ರಕಾರ ಆಗಸ್ಟ್ 1 ರಿಂದ ಬೆಳಗ್ಗೆ 9 ಗಂಟೆಗೆ ತರಗತಿಗಳು ಆರಂಭವಾಗಲಿವೆ.
ಈ ಹಿಂದೆ ಬೆಳಗ್ಗೆ 8 ಗಂಟೆಯಿಂದಲೇ ತರಗತಿಗಳನ್ನು ಆರಂಭಿಸಬೇಕೆಂದು ಶಿಕ್ಷಣ ಇಲಾಖೆ ಸೂಚಿಸಿತ್ತು, ಆದರೆ ವಿದ್ಯಾರ್ಥಿಗಳು ಕಾಲೇಜು ಸಿಬ್ಬಂದಿ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ವೇಳಾ ಪಟ್ಟಿ ಬದಲಾವಣೆ ಮಾಡಿದೆ.
ಶುಕ್ರವಾರ ಶಿಕ್ಷಣ ಇಲಾಖೆ ಹೊರಡಿಸಿರುವ ಸುತ್ತೋಲೆ ಪ್ರಕಾರ ಆಗಸ್ಟ್1 ರಿಂದ ಬೆಳಗ್ಗೆ 9 ಗಂಟೆಗೆ ಪದವಿ ತರಗತಿಗಳು ಆರಂಭವಾಗಲಿವೆ, ಆದರೆ ಈಗಾಗಲೇ ಎರಡು ಪಾಳಿಗಳಲ್ಲಿ ಕೆಲಸ ಮಾಡುತ್ತಿರುವ ಕಾಲೇಜುಗಳು ಬೆಳಗ್ಗೆ 8 ಗಂಟೆಗೆ ತರಗತಿಗಳನ್ನು ಆರಂಭಿಸಿದ್ದು ಆ ಕಾಲೇಜುಗಳಲ್ಲಿ ಇದೇ ವೇಳಾ ಪಟ್ಟಿ ಮುಂದುವರಿಯಲಿದೆ. ಮಲೆನಾಡು, ಕರಾವಳಿ ಹಾಗೂ ಗ್ರಾಮೀಣ ಭಾಗದಲ್ಲವಿ ಸಾರಿಗೆ ಸಂಪರ್ಕ ಸರಿಯಾಗಿಲ್ಲದ ಕಾರಣ ವಿದ್ಯಾರ್ಥಿಗಳಿಂದ ಆಕ್ಷೇಪ ಬಂದಿತ್ತು, ಈ ಹಿನ್ನೆಲೆಯಲ್ಲಿ ಈ ಬದಲಾವಣೆ ಮಾಡಲಾಗಿದೆ.
ಕಾಲೇಜು ವೇಳಾ ಪಟ್ಟಿ  ಬದಲಾವಣೆಯಿಂದ ಪಠ್ಯೇತರ ಚಟುವಟಿಕೆಗಳಾದ ಎನ್‌ಎಸ್‌ಎಸ್‌, ಎಸ್‌ಸಿಸಿ, ಕೌಶಲಾಭಿವೃದ್ಧಿ ತರಬೇತಿ, ವಿಶೇಷ ತರಗತಿಗಳು, ಕ್ರೀಡಾ ಚಟುವಟಿಕೆಗಳನ್ನು ಯಾವುದೇ ರೀತಿಯಲ್ಲೂ ಕಡಿತಗೊಳಿಸುವಂತಿಲ್ಲ ಎಂದು ಖಡಕ್‌ ಸೂಚನೆ ನೀಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com