ಸಾಮಾಜಿಕ ಜಾಲತಾಣಗಳ ಮೂಲಕ ಹೂಡಿಕೆಗೆ ಸಾರ್ವಜನಿಕರನ್ನು ಪ್ರೇರೇಪಿಸುತ್ತಿದ್ದ ಈ ಕಂಪನಿಗಳು ಈಗಾಗಲೇ ಹಲವಾರು ಜನರಿಗೆ ಟೋಪಿ ಹಾಕಿವೆ. ಇಂಜಿನಿಯರ್‌ಗಳು, ಸರ್ಕಾರಿ ನೌಕರರು, ನಿವೃತ್ತ ಅಧಿಕಾರಿಗಳು, ಮಹಿಳೆಯರು ಸೇರಿದಂತೆ ಹಲವಾರು ಪ್ರಜ್ಞಾವಂತರೇ ಹಣ ಕಳೆದುಕೊಂಡಿದ್ದಾರೆ ಎಂದು ವಿವರಿಸಿದರು. ಅಲ್ಲದೆ ಇವುಗಳಲ್ಲಿ ಹಣ ಹೂಡಿಕೆ ಮಾಡಿ ಬಹಳಷ್ಟು ಮಂದಿ ಮೋಸ ಹೋಗಿದ್ದಾರೆ. ಕೆಲವರು ಮಾತ್ರ ದೂರು ಕೊಟ್ಟಿದ್ದಾರೆ. ದೂರು ಕೊಡದೇ ಇರುವವರು ಹತ್ತಿರದ ಪೊಲೀಸ್ ಠಾಣೆಗಾಗಲಿ ಅಥವಾ ಸಿಐಡಿ ಆರ್ಥಿಕ ಅಪರಾಧಗಳ ವಿಭಾಗಕ್ಕಾಗಲ್ಲಿ ನೇರ ಮಾಹಿತಿ ನೀಡುವಂತೆ ಅಧಿಕಾರಿಗಳು ಮನವಿ ಮಾಡಿದರು.