ಕುಡಿಯುವ ನೀರಿಗೆ ಸದ್ಯ ಸರ್ಕಾರದ ಆದ್ಯತೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಕೃಷಿ ಕಾರ್ಯಗಳಿಗೆ ಕಾವೇರಿ ನೀರು ಬಿಡುಗಡೆ ಮಾಡುವಂತೆ ಮಂಡ್ಯ, ಮೈಸೂರು ಭಾಗಗಳಲ್ಲಿ ಜೆಡಿಎಸ್ ನೇತೃತ್ವದಲ್ಲಿ ರೈತರ ಪ್ರತಿಭಟನೆ...
ಮುಖ್ಯಮಂತ್ರಿ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ
ಮೈಸೂರು: ಕೃಷಿ ಕಾರ್ಯಗಳಿಗೆ ಕಾವೇರಿ ನೀರು ಬಿಡುಗಡೆ ಮಾಡುವಂತೆ ಮಂಡ್ಯ, ಮೈಸೂರು ಭಾಗಗಳಲ್ಲಿ ಜೆಡಿಎಸ್ ನೇತೃತ್ವದಲ್ಲಿ ರೈತರ ಪ್ರತಿಭಟನೆ ನಡೆಯುತ್ತಿರುವ ಮಧ್ಯೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿ, ಪ್ರಸ್ತುತ ಸ್ಥಿತಿಯಲ್ಲಿ ಜನರಿಗೆ ಕುಡಿಯುವ ನೀರು ಸಂಗ್ರಹಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಹೇಳಿದ್ದಾರೆ.
ಕಾವೇರಿ ಜಲಾನಯನದ ನಾಲ್ಕ ಜಲಾಶಯಗಳಲ್ಲಿ ಶೇಕಡಾ 50ಕ್ಕಿಂತಲೂ ಕಡಿಮೆ ನೀರು ಸಂಗ್ರಹವಿದ್ದು ಇದರಿಂದಾಗಿ ಕೃಷಿ ನೀರಾವರಿಗೆ ನೀರು ಬಿಡುಗಡೆ ಮಾಡುವುದು ಸರ್ಕಾರಕ್ಕೆ ಕಷ್ಟವಾಗುತ್ತದೆ. ಈ ವಿಷಯವನ್ನು ಆಗಸ್ಟ್ 5ರಂದು ನಡೆಯುವ ಸರ್ವಪಕ್ಷ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಹೇಳಿದರು.
ಅವರು ನಿನ್ನೆ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕಾವೇರಿ ನ್ಯಾಯಾಧೀಕರಣದ ಆದೇಶದಂತೆ ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡುವ ಕುರಿತು ಸರ್ಕಾರದ ನಿರ್ಧಾರವನ್ನು ಅವರು ಸಮರ್ಥಿಸಿದರು.
ತಮಿಳುನಾಡಿಗೆ ಹೆಚ್ಚು ನೀರು ಬಿಡುಗಡೆ ಮಾಡಿದರೆ ಪರಿಸ್ಥಿತಿಯನ್ನು ನಿಭಾಯಿಸುವುದು ಕಷ್ಟ. ನೀರಾವರಿ ಕಾಲುವೆಗಳಿಗೆ ನೀರು ಬಿಡುಗಡೆ ಮಾಡಬೇಕೆಂದು ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ರಾಜಕೀಯ ಮಾಡುವುದನ್ನು ನಿಲ್ಲಿಸಬೇಕು. ನಾನು ಕೂಡ ಒಬ್ಬ ರೈತ. ನೀರು ಬಿಡುಗಡೆ ಮಾಡಲು ನನಗೂ ಇಚ್ಛೆಯಿದೆ. ಜಲಾಶಯದಲ್ಲಿ ಸಾಕಷ್ಟು ನೀರು ಇದ್ದರೆ ಬಿಡಬಹುದು. ಮುಂಗಾರು ವಿಫಲವಾದದ್ದರಿಂದ ನಾವು ಕುಡಿಯುವ ನೀರಿಗೆ ಆದ್ಯತೆ ನೀಡುತ್ತೇವೆ ಎಂದು ಹೇಳಿದರು.
ಕಾವೇರಿ ಜಲಾಶಯದಲ್ಲಿ ಈಗಿರುವ ನೀರು ನೀರಾವರಿ ಚಟುವಟಿಕೆಗಳಿಗೆ ಸಾಕಾಗುವುದಿಲ್ಲ ಎಂದರು.
ಮಹದಾಯಿ ನದಿ ನೀರು ಹಂಚಿಕೆ ವಿವಾದವನ್ನು ಬಗೆಹರಿಸುವಲ್ಲಿ ಕಳೆದ ಎರಡು ವರ್ಷಗಳಿಂದ ಸರ್ಕಾರ ವಿಫಲವಾಗುತ್ತಿದೆ ಎಂದು ಸುದ್ದಿಗಾರರು ಪ್ರಸ್ತಾಪಿಸಿದಾಗ ಪ್ರಧಾನಿ ಮೋದಿಯವರು ಈ ವಿಷಯದಲ್ಲಿ ಮಧ್ಯೆ ಪ್ರವೇಶಿಸಿ ವಿವಾದ ಬಗೆಹರಿಸಬೇಕು. ರಾಜ್ಯ ಸರ್ಕಾರ ಬರೆದ ಪತ್ರಕ್ಕೆ ಮೋದಿಯವರು ಪ್ರತಿಕ್ರಿಯಿಸಿಲ್ಲ ಎಂದು ಹೇಳಿದರು.
ಈ ವಿಷಯದಲ್ಲಿ ರಾಜ್ಯದ ಬಿಜೆಪಿ ಸಂಸದರು ತಮ್ಮ ರಾಜಕೀಯ ಇಚ್ಛಾಶಕ್ತಿ ತೋರಿಸಿ ಪ್ರಧಾನಿಯವರ ಮೇಲೆ ಒತ್ತಡ ಹೇರಬೇಕು. ಆದರೆ ಅವರು ತಮ್ಮ ಜವಾಬ್ದಾರಿಯಿಂದ ನುಣುಚಿಕೊಳ್ಳುತ್ತಿದ್ದಾರೆ ಎಂದು ಮುಖ್ಯಮಂತ್ರಿ ಆರೋಪಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com