ಕಲಬುರಗಿ: ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ಹೈದರಾಬಾದ್- ಕರ್ನಾಟಕ ಭಾಗಕ್ಕೆ ವಿಶೇಷ ಸ್ಥಾನಮಾನ ಸಿಗಲು ಹೋರಾಡುತ್ತಿದ್ದ ವಿದ್ಯಾಧರ ಗುರೂಜಿ ಕಲಬುರಗಿಯ ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.
ಅವರು ಮೊನ್ನೆ ಶುಕ್ರವಾರ ಮಾಜಿ ಸಿಎಂ ಧರಂ ಸಿಂಗ್ ಅವರ ಅಂತ್ಯ ಕ್ರಿಯೆಯಲ್ಲಿ ಭಾಗವಹಿಸಿ ಹಿಂದಿರುಗುತ್ತಿರುವಾಗ ತೀವ್ರ ಹೃದಯಾಘಾತಕ್ಕೆ ಒಳಗಾಗಿದ್ದರು. ನಂತರ ಅವರನ್ನು ಕಲಬುರಗಿಯ ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ರಾತ್ರಿ 8 ಗಂಟೆ ಸುಮಾರಿಗೆ ಆಸ್ಪತ್ರೆಯಲ್ಲಿಯೇ ನಿಧನರಾಗಿದ್ದಾರೆ.
ವಿದ್ಯಾಧರ ಗುರೂಜಿಯವರ ಆಸೆಯಂತೆ ಅವರ ದೇಹವನ್ನು ಕಲಬುರಗಿಯ ಮಹಾದೇವಪ್ಪ ರಾಂಪೂರೆ ವೈದ್ಯಕೀಯ ಕಾಲೇಜಿಗೆ ದಾನ ಮಾಡಲಾಗುವುದು ಎಂದು ಅವರ ಕುಟುಂಬ ವರ್ಗದವರು ತಿಳಿಸಿದ್ದಾರೆ.