ವೃತ್ತಿಪರ ಕೋರ್ಸ್ ಗಳಲ್ಲಿ ಕನ್ನಡ ಭಾಷೆ ಕಡ್ಡಾಯ: ಕೆಡಿಎಯಿಂದ ವಿಶ್ವ ವಿದ್ಯಾಲಯಗಳಿಗೆ ಆದೇಶ

ರಾಜ್ಯಾದ್ಯಂತ ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಹಂತಗಳಲ್ಲಿ ಕನ್ನಡ ಭಾಷೆ ಕಲಿಕೆಯನ್ನು ಕಡ್ಡಾಯಗೊಳಿಸುವಂತೆ....
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಬೆಂಗಳೂರು: ರಾಜ್ಯಾದ್ಯಂತ ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಹಂತಗಳಲ್ಲಿ ಕನ್ನಡ ಭಾಷೆ ಕಲಿಕೆಯನ್ನು ಕಡ್ಡಾಯಗೊಳಿಸುವಂತೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಆದೇಶ ನೀಡಿದೆ. 
ವಿಶ್ವವಿದ್ಯಾಲಯಗಳು ವಿದ್ಯಾರ್ಥಿಗಳಿಗೆ ಕ್ರೆಡಿಟ್ ಅಂಕಗಳನ್ನು ನೀಡಬೇಕು. ಆಗ ಅವರು ಕನ್ನಡ ವಿಷಯವನ್ನು ಗಂಭೀರವಾಗಿ ತೆಗೆದುಕೊಳ್ಳುತ್ತಾರೆ ಎಂದು ಕೂಡ ಅಭಿವೃದ್ಧಿ ಪ್ರಾಧಿಕಾರ ಹೇಳಿದೆ. ಕೇವಲ ಬೋಧನೆ ಮಾತ್ರವಲ್ಲ. ಪರೀಕ್ಷೆಗಳಲ್ಲಿ ಕ್ರೆಡಿಟ್ ಅಂಕಗಳನ್ನು ನೀಡಲು ಕೂಡ ನಮಗೆ ಸೂಚನೆ ಬಂದಿದೆ ಎಂದು ವಿಶ್ವವಿದ್ಯಾಲಯದ ಉಪ ಕುಲಪತಿಯೊಬ್ಬರು ಹೇಳುತ್ತಾರೆ.
ವಿಶ್ವವಿದ್ಯಾಲಯಗಳಲ್ಲಿ ಕನ್ನಡ ಭಾಷೆಯನ್ನು ಬೋಧಿಸುವ ಕುರಿತು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಶೀಘ್ರದಲ್ಲೇ ಪಠ್ಯಕ್ರಮವನ್ನು ವಿನ್ಯಾಸಗೊಳಿಸಲಿದೆ. ರಾಜ್ಯ ಸರ್ಕಾರ ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳ ದ್ವಿಭಾಷಾ ನೀತಿಯನ್ನು ಜಾರಿಗೆ ತರಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ ಬೆನ್ನಲ್ಲೇ ಅಭಿವೃದ್ಧಿ ಪ್ರಾಧಿಕಾರ ಕೂಡ ಈ ಆದೇಶ ನೀಡಿದೆ. ಬೆಂಗಳೂರಿನ ಮೆಟ್ರೊ ನಿಲ್ದಾಣಗಳಲ್ಲಿ ಫಲಕಗಳಲ್ಲಿ ಹಿಂದಿ ಭಾಷೆಯನ್ನು ತೆಗೆಯಲು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದೆ.
ಬೋರಲಿಂಗಯ್ಯ ಸಮಿತಿ ಶಿಫಾರಸು: ಪ್ರೊ.ಬೋರಲಿಂಗಯ್ಯ ಸಮಿತಿ ವರದಿಯ ಜಾರಿ ಕುರಿತ ಪರಿಸ್ಥಿತಿ ವರದಿಯನ್ನು ಸಲ್ಲಿಸುವಂತೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ವಿಶ್ವವಿದ್ಯಾಲಯಗಳಿಗೆ ಸುತ್ತೋಲೆ ಹೊರಡಿಸಿದೆ. ಈ ಸಮಿತಿ ವರದಿಯನ್ನು ವರ್ಷದ ಹಿಂದೆ ಸಲ್ಲಿಸಲಾಗಿತ್ತು. ಹಲವು ವಿಶ್ವವಿದ್ಯಾಲಯಗಳು ಇದಕ್ಕೆ ಪ್ರತಿಕ್ರಿಯೆ ನೀಡದಿದ್ದರಿಂದ ಈ ಬಗ್ಗೆ ಚರ್ಚೆ ನಡೆಸಲು ನಿನ್ನೆ ಸಭೆ ಕರೆಯಲಾಗಿತ್ತು. ಈ ವೇಳೆ ಸಮಿತಿ ಸದಸ್ಯರು, ಎಂಜಿನಿಯರಿಂಗ್, ಮೆಡಿಕಲ್ ಸೇರಿದಂತೆ ವೃತ್ತಿಪರ ಕೋರ್ಸ್ ಗಳಲ್ಲಿ ಕನ್ನಡವನ್ನು ಜಾರಿಗೆ ತರಬೇಕೆಂದು ಕಳೆದ ವರ್ಷ ಶಿಫಾರಸು ಮಾಡಿದ್ದರು. ಆದರೆ ಹಲವು ವಿಶ್ವವಿದ್ಯಾಲಯಗಳು ಶಿಫಾರಸನ್ನು ಒಪ್ಪಿರಲಿಲ್ಲ. 
ಕಳೆದ ವಾರ ಕರ್ನಾಟಕ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಉನ್ನತ ಶಿಕ್ಷಣ ಸಂಸ್ಥೆಗಳ ಪ್ರಾಂಶುಪಾಲರೊಂದಿಗೆ ಸಭೆ ನಡೆಸಿ ಕಾಲೇಜು ಮಟ್ಟದಲ್ಲಿ ಕಡ್ಡಾಯ ಕನ್ನಡ ಜಾರಿಗೆ ನಿರ್ದೇಶಿಸಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com