ಕಲಬುರಗಿ: ಅಪಹರಣಕಾರರ ಮೇಲೆ ಗುಂಡಿನ ದಾಳಿ, ಪೊಲೀಸರು ಸೇರಿ ಐವರಿಗೆ ಗಾಯ

ವ್ಯಕ್ತಿಯೊಬ್ಬರನ್ನು ಅಪಹರಿಸಿ ಲಕ್ಷಾಂತರ ರುಪಾಯಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಅಪಹರಣಾಕಾರರ ಮೇಲೆ ಸೋಮವಾರ ಪೊಲೀಸರು ಗುಂಡು...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on
ಕಲಬುರಗಿ: ವ್ಯಕ್ತಿಯೊಬ್ಬರನ್ನು ಅಪಹರಿಸಿ ಲಕ್ಷಾಂತರ ರುಪಾಯಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಅಪಹರಣಾಕಾರರ ಮೇಲೆ ಸೋಮವಾರ ಪೊಲೀಸರು ಗುಂಡು ಹಾರಿಸಿದ ಘಟನೆ ಕಲಬುರಗಿ ತಾಲೂಕಿನ ಬಸನಾಳ ಗ್ರಾಮದ ಬಳಿ ನಡದಿದೆ. ಘಟನೆಯಲ್ಲಿ ಮೂವರು ಪೊಲೀಸ್ ಸಿಬ್ಬಂದಿ ಹಾಗೂ ಇಬ್ಬರು ಆರೋಪಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ.
ಆರೋಪಿಗಳಾದ ಕಿರಣ್ ಕುಮಾರ್ ಮತ್ತು ದೀಪಕ್ ಕಳೆದ ಶನಿವಾರ ಚಿತ್ತಾಪುರ ತಾಲೂಕಿನ ತಾವರಖೆಡ ಗ್ರಾಮದ ಶ್ರೀನಾಥ್ ಎಂಬುವವರನ್ನು ಅಪಹರಿಸಿ ಅವರಿಂದ 15 ಲಕ್ಷ ರುಪಾಯಿ ಹಣಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಈಶಾನ್ಯ ವಲಯ ಐಜಿಪಿ ಅಲೋಕ್ ಕುಮಾರ್ ಅವರು ಮಾಧ್ಯಮಕ್ಕೆ ತಿಳಿಸಿದ್ದಾರೆ.
15 ಲಕ್ಷ ರುಪಾಯಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಆರೋಪಿಗಳು, ಹಣ ನೀಡದಿದ್ದರೆ ಮತ್ತು ಅಪಹರಣ ವಿಚಾರವನ್ನು ಪೊಲೀಸರಿಗೆ ತಿಳಿಸಿದರೆ ಶ್ರೀನಾಥ್ ಮತ್ತು ಆತನ ಕುಟುಂಬದವನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದರು. ಆದರೆ 15 ಲಕ್ಷ ರುಪಾಯಿ ಕೊಡಲು ಸಾಧ್ಯವಿಲ್ಲ ಎಂದಾಗ 4 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಅಲೋಕ್ ಕುಮಾರ್ ಹೇಳಿದ್ದಾರೆ.
4 ಲಕ್ಷ ರುಪಾಯಿ ನೀಡುವ ಸ್ಥಿತಿಯಲ್ಲಿರದ ಕುಟಂಬ ಅಂತಿಮವಾಗಿ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣ ಬೆನ್ನತ್ತಿದ ಪೊಲೀಸರು, ಅಪಹರಣಾಕಾರರು ಬಸನಾಳ ಬಳಿ ಇದ್ದಾರೆ ಎಂಬ ಖಚಿತ ಮಾಹಿತಿಯನ್ನಾಧರಿಸಿ, ದಾಳಿ ನಡೆಸಿದ್ದಾರೆ. ಈ ವೇಳೆ ಅಪಹರಣಾಕಾರರೂ ಪೊಲೀಸರ ಮೇಲೆ ದಾಳಿ ನಡೆಸಿದ್ದು, ಆತ್ಮ ರಕ್ಷಣೆಗಾಗಿ ಪೊಲೀಸರು ಅವರ ಮೇಲೆ ಗುಂಡು ಹಾರಿಸಿದ್ದಾರೆ. ದಾಳಿಯಲ್ಲಿ ಆರೋಪಿಗಳ ಕಾಲಿಗೆ ಗುಂಡು ತಗುಲಿದೆದ್ದೂ, ಮೂವರು ಪೊಲೀಸ್ ಸಿಬ್ಬಂದಿಗೂ ಸಣ್ಣ ಪುಟ್ಟ ಗಾಯಗಳಾಗಿವೆ.
ಆರೋಪಿಗಳನ್ನು ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ಹಾಗೂ ಪೊಲೀಸರನ್ನು ಬಸವೇಶ್ವರ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com