ಗುಪ್ತಚರ ಇಲಾಖೆಗೆ ಮರಳಿದ ಎ.ಎಂ.ಪ್ರಸಾದ್

ಹಲವು ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ನಿನ್ನೆ ಆದೇಶ ಹೊರಡಿಸಿದೆ. ಹೆಚ್ಚುವರಿ ಪೊಲೀಸ್...
ಆಶಿತ್ ಮೋಹನ್ ಪ್ರಸಾದ್, ಪ್ರವೀಣ್ ಸೂದ್, ಪಿ.ಎಸ್.ಹರ್ಷಾ
ಆಶಿತ್ ಮೋಹನ್ ಪ್ರಸಾದ್, ಪ್ರವೀಣ್ ಸೂದ್, ಪಿ.ಎಸ್.ಹರ್ಷಾ
Updated on: 
ಬೆಂಗಳೂರು: ಹಲವು ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ನಿನ್ನೆ ಆದೇಶ ಹೊರಡಿಸಿದೆ. ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಆಶಿತ್ ಮೋಹನ್ ಪ್ರಸಾದ್ ಅವರನ್ನು ಪೊಲೀಸ್,ಗುಪ್ತಚರ ಇಲಾಖೆಯ ಪೊಲೀಸ್ ಮಹಾ ನಿರ್ದೇಶಕರಾಗಿ ಬಡ್ತಿ ನೀಡಲಾಗಿದೆ. ಆ ಸ್ಥಾನದಲ್ಲಿದ್ದ ಅಮ್ರಿತ್ ಪೌಲ್ ಅವರನ್ನು ಬದಲಾಯಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ಪ್ರವೀಣ್ ಸೂದ್ ಅವರನ್ನು ನೇಮಿಸಲಾಗಿದೆ.
ಗುಪ್ತಚರ ಇಲಾಖೆಯ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಸ್ಥಾನದಿಂದ ಉಪ ಪೊಲೀಸ್ ಸೂಪರಿಂಟೆಂಡೆಂಟ್ ಎಂ.ಕೆ.ಗಣಪತಿ ಆತ್ಮಹತ್ಯೆ ನಂತರ ತೆಗೆದುಹಾಕಲಾಗಿತ್ತು. ವಾರ್ತಾ ಮತ್ತು ಮಾಹಿತಿ ಇಲಾಖೆಯ ನಿರ್ದೇಶಕರಾಗಿ ಡಿಸಿಪಿ ಹರ್ಷಾ ನೇಮಕಗೊಂಡಿದ್ದಾರೆ.
ಬೆಂಗಳೂರು ನಗರದ ಈಶಾನ್ಯ ಭಾಗದ ಡಿಸಿಪಿಯಾಗಿದ್ದ  ಪಿ.ಎಸ್.ಹರ್ಷಾ ಅವರನ್ನು  ವಾರ್ತಾ, ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನಿರ್ದೇಶಕರಾಗಿ ವರ್ಗಾವಣೆ ಮಾಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com