ಹುಬ್ಬಳ್ಳಿ: ಕಬ್ಬಿನ ಹೊಲದಲ್ಲಿ ವಿದ್ಯುತ್ ತಂತಿ ತಗುಲಿ ಇಬ್ಬರು ರೈತರು ಸಾವು

ಕಬ್ಬಿನ ಹೊಲದಲ್ಲಿ ವಿದ್ಯುತ್ ತಂತಿ ತಗುಲಿ ಇಬ್ಬರು ರೈತರು ಮೃತಪಟ್ಟಿರುವ ದಾರುಣ ಘಟನೆ ಶುಕ್ರವಾರ ಧಾರವಾಡ ಜಿಲ್ಲೆಯ ಕಲಘಟಗಿ....
ಮೃತಪಟ್ಟ ರೈತ
ಮೃತಪಟ್ಟ ರೈತ
Updated on
ಹುಬ್ಬಳ್ಳಿ: ಕಬ್ಬಿನ ಹೊಲದಲ್ಲಿ ವಿದ್ಯುತ್ ತಂತಿ ತಗುಲಿ ಇಬ್ಬರು ರೈತರು ಮೃತಪಟ್ಟಿರುವ ದಾರುಣ ಘಟನೆ ಶುಕ್ರವಾರ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ದೇವಿಕೊಪ್ಪ ಗ್ರಾಮದಲ್ಲಿ ನಡೆದಿದೆ. 
ಮೃತಪಟ್ಟ ರೈತರು ಬಸವರಾಜ್ ಕ್ಯಾರಕೊಪ್ಪ (52) ಮತ್ತು ಚನ್ನಬಸಪ್ಪ ಧೂಳಿಕೊಪ್ಪ (45) ಎಂದು ಗುರುತಿಸಲಾಗಿದೆ.
ಪೊಲೀಸರ ಪ್ರಕಾರ, ಕಬ್ಬಿನ ಹೊಲದಲ್ಲಿ ಕೆಲಸ ಮಾಡುವಾಗ ಆಕಸ್ಮಿಕವಾಗಿ ತುಂಡರಿಸಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಸಾವನ್ನಪ್ಪಿದ್ದಾರೆ.
ಈ ಸಂಬಂಧ ಕಲಘಟಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com