ಗೋಹತ್ಯೆ ನಿರ್ಬಂಧ: 40ಕ್ಕೂ ಹೆಚ್ಚು ಪ್ರತಿಭಟನಾಕಾರರ ಬಂಧನ

ಕೇಂದ್ರದ ಗೋಹತ್ಯೆ ನಿರ್ಬಂಧಕ್ಕೆ ರಾಜ್ಯ ಸರ್ಕಾರ ವಿರೋಧ ವ್ಯಕ್ತಪಡಿಸಿದ್ದರೂ, ಸಿಲಿಕಾನ್ ಸಿಟಿಯಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಲು ಮುಂದಾದ ವಿವಿಧ ಸಂಘಟನೆಗಳ ಕಾರ್ಯಕರ್ತನ್ನು ಪೊಲೀಸರು ವಶಕ್ಕೆ...
ಟೌನ್ ಹಾಲ್ ಬಳಿ ಪ್ರತಿಭಟನೆ ನಡೆಸುತ್ತಿದ್ದ ಪ್ರತಿಭಟನಾಕಾರನನ್ನು ವಶಕ್ಕೆ ಪಡೆದುಕೊಳ್ಳುತ್ತಿರುವ ಪೊಲೀಸರು
ಟೌನ್ ಹಾಲ್ ಬಳಿ ಪ್ರತಿಭಟನೆ ನಡೆಸುತ್ತಿದ್ದ ಪ್ರತಿಭಟನಾಕಾರನನ್ನು ವಶಕ್ಕೆ ಪಡೆದುಕೊಳ್ಳುತ್ತಿರುವ ಪೊಲೀಸರು
Updated on: 
ಬೆಂಗಳೂರು: ಕೇಂದ್ರದ ಗೋಹತ್ಯೆ ನಿರ್ಬಂಧಕ್ಕೆ ರಾಜ್ಯ ಸರ್ಕಾರ ವಿರೋಧ ವ್ಯಕ್ತಪಡಿಸಿದ್ದರೂ, ಸಿಲಿಕಾನ್ ಸಿಟಿಯಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಲು ಮುಂದಾದ ವಿವಿಧ ಸಂಘಟನೆಗಳ ಕಾರ್ಯಕರ್ತನ್ನು ಪೊಲೀಸರು ವಶಕ್ಕೆ ಪಡೆದು ಬಿಡುಗಡೆಗೊಳಿಸಿದ್ದಾರೆ. 
ದಲಿತ ಸಂಘರ್ಷ ಸಮಿತಿ. ಸೋಷಿಯನ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ, ಸಮತಾ ಸೈನಿಕ ದಳ ಸೇರಿದಂತೆ ಇನ್ನಿತರ ಸಂಘಟನೆಗಳು ನಿನ್ನೆ ಗೋಹತ್ಯೆ ನಿರ್ಬಂಧ ಕುರಿತಂತೆ ಕೇಂದ್ರ ಸರ್ಕಾರ ಹೊರಡಿಸಿದ್ದ ಆದೇಶದ ವಿರುದ್ಧ ಪ್ರತಿಭಟನೆಗೆ ಕರೆ ನೀಡಿದ್ದವು. 
ಪ್ರತಿಭಠನೆಗಾಗಿ ಪುರಭವನ ಬಳಿ ಆಗಮಿಸಿತ್ತಿದ್ದ ಕೆಲ ಕಾರ್ಯಕರ್ತರನ್ನು ಪೊಲೀಸರು ಶಿವಾಜಿನಗರದಲ್ಲಿಯೇ ತಡೆದು ವಶಕ್ಕೆ ಪಡೆದರು. ಇನ್ನತರ ಸಂಘಟನೆಗಳ ಕಾರ್ಯಕರ್ತರನ್ನು ಬಿಬಿಎಂಪಿ ಸಮೀಪ ವಶಕ್ಕೆ ಪಡೆದುಕೊಂಡರು. ಕೇಂದ್ರದ ವಿರುದ್ಧ ಘೋಷಣೆ ಕೂಗಲು ಸಹ ಅವಕಾಶ ನೀಡದೆ ಪ್ರತಿಭಟನಾಕರರನ್ನು ವಶಕ್ಕೆ ಪಡೆದುಕೊಂಡರು. ಇನ್ನು ಪುರಭವನ ಬಳಿ ಘೋಷಣೆಗಳನ್ನು ಕೂಗಿ, ಭಿತ್ತಿ ಪತ್ರಗಳನ್ನು ತೂರಿದ ಏಳು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು.
ಕಾರ್ಪೋರೇಷನ್ ವೃತ್ತದ ಬಳಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ಪ್ರತಿಭಟನಾಕರರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಅಲ್ಲದೆ, ಪ್ರತಿಭಟನಾಕಾರನೊಬ್ಬನ ಮೇಲೆ ಪೊಲೀಸರು ಲಾಠಿಯಿಂದ ಹೊಡೆದಿದ್ದು, ಪ್ರತಿಭಟನಾಕಾರನ ತಲೆಗೆ ಗಾಯವಾಗಿದೆ. ಇದಲ್ಲದೆ, ಇನ್ನೂ ಕೆಲ ಪ್ರತಿಭಟನಾಕಾರರ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪಗಳು ಕೇಳಿಬರತೊಡಗಿವೆ. 
ಈ ಬಗ್ಗೆ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿಕೆ ನೀಡಿದ್ದು, ಟೌನ್ ಬಳಿ ಪ್ರತಿಭಟನೆ ನಡೆಸಿದರೆ, ಸಂಚಾರಕ್ಕೆ ಹೆಚ್ಚಿನ ಸಮಸ್ಯೆಯಾಗಲಿದ್ದು, ಈ ಹಿನ್ನಲೆಯಲ್ಲಿ ಪ್ರತಿಭಟನೆ ನಡೆಸಲು ಅನುಮತಿ ನಿರಾಕರಿಸಲಾಗಿತ್ತು. ಅನುಮತಿ ಪಡೆದ ಬಳಿಕ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸುವಂತೆಯೂ ತಿಳಿಸಲಾಗಿತ್ತು ಎಂದು ಹೇಳಿದ್ದಾರೆ. 
ಪ್ರತಿಭಟನಾಕಾರರು ಮಾತನಾಡಿ, ನಾವು ಸಂಚಾರಕ್ಕೆ ಯಾವುದೇ ತೊಂದರೆಯನ್ನು ಮಾಡುವುದಿಲ್ಲ. ಟೌನ್ ಹಾಲ್ ಬಳಿಯಿರುವ ಮೆಟ್ಟಿಲುಗಳ ಮೇಲೆ ಕುಳಿತುಕೊಳ್ಳುತ್ತೇವೆಂದು ತಿಳಿಸಿದ್ದೆವು. ಪ್ರತಿಭಟನೆ ನಡೆಸುವುದು ಯಾರಿಗೂ ತಿಳಿಯಬಾರದೆಂಬ ಕಾರಣಕ್ಕೆ ಫ್ರೀಡಂಪಾರ್ಕ್ ಬಳಿ ನಡೆಸುವಂತೆ ಪೊಲೀಸರು ತಿಳಿಸಿದ್ದರು ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com