ಬೆಂಗಳೂರು: 5 ವರ್ಷದ ಬಾಲಕಿ ಮೇಲೆ ಗ್ಯಾಂಗ್ ರೇಪ್- ಬೌರಿಂಗ್ ಆಸ್ಪತ್ರೆಗೆ ದಾಖಲು

ಐದು ವರ್ಷದ ಹಸುಳೆಯ ಮೇಲೆ ಕಾಮುಕರು ಸಾಮೂಹಿಕ ಅತ್ಯಾಚಾರ ಎಸಗಿರುವ ಶಂಕೆ ವ್ಯಕ್ತವಾಗಿದೆ. ಆಸ್ಪತ್ರೆಯಲ್ಲಿ ಸದ್ಯ ಮಗು ಸಾವು ಬದುಕಿನ ಮಧ್ಯೆ ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಬೆಂಗಳೂರು: ಐದು ವರ್ಷದ ಹಸುಳೆಯ ಮೇಲೆ ಕಾಮುಕರು ಸಾಮೂಹಿಕ ಅತ್ಯಾಚಾರ ನಡೆಸಿ ಪರಾರಿಯಾಗಿರುವ ಘಟನೆ ಬೆಂಗಳೂರಿನಲ್ಲಿ ನಿನ್ನೆ ನಡೆದಿದೆ. ಆಸ್ಪತ್ರೆಯಲ್ಲಿ ಸದ್ಯ ಮಗು ಸಾವು ಬದುಕಿನ ಮಧ್ಯೆ ಹೋರಾಡುತ್ತಿದೆ.
ವೈಯಾಲಿ ಕಾವಲ್‌ ಕ್ರಾಸ್‌ ಬಳಿ ಕಾರಿನಲ್ಲಿ  ಬಂದ ನಾಲ್ವರು ಕಾಮುಕರು ಬಾಲಕಿಯನ್ನು ಅಪಹರಿಸಿ ನಿರ್ಜನ ಪ್ರದೇಶದಲ್ಲಿ ಬರ್ಬರವಾಗಿ ಅತ್ಯಾಚಾರಗೈದಿದ್ದಾರೆ. ತೀವ್ರ ರಕ್ತಸ್ರಾವಕ್ಕೊಳಗಾಗಿ ಮಾರಣಾಂತಿಕವಾಗಿ ಗಾಯಗೊಂಡು ಅರೆಪ್ರಜ್ಞಾವಸ್ತೆಯಲ್ಲಿದ್ದ ಬಾಲಕಿಯನ್ನು ರಸ್ತೆ ಬದಿ ನಿರ್ದಯವಾಗಿ ಎಸೆದು ಪರಾರಿಯಾಗಿದ್ದಾರೆ. 
ಮಗುವಿನ ಮೇಲೆ ಮೂರ್ನಾಲ್ಕು ಜನ ಅತ್ಯಾಚಾರ ಎಸಗಿದ್ದಾರೆ ಎಂದು ಶಂಕಿಸಲಾಗಿದೆ. ರಸ್ತೆ ಬದಿ ಮಗು ರಾತ್ರಿ ಹೊತ್ತು ಅಳುತ್ತಿದ್ದ ಶಬ್ದ ಕೇಳಿದ ದಾರಿಹೋಕರು ಕೆ.ಜಿ.ಹಳ್ಳಿ ಪೊಲೀಸರಿಗೆ ತಿಳಿಸಿದ್ದಾರೆ.  ಸದ್ಯ ಮಗುವನ್ನು ಐಸಿಯುನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪರಿಸ್ಥಿತಿ ಚಿಂತಾಜನಕವಾಗಿದ್ದು, ಕೆಜಿ ಹಳ್ಳಿ ಪೊಲೀಸರು ಪೋಕ್ಸೋ ಕಾಯಿದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿಗಳಿಗಾಗಿ ಪೊಲೀಸರು ತಂಡ ರಚಿಸಿ ಹುಡುಕಾಟ ನಡೆಸುತ್ತಿದ್ದಾರೆ.  
ಇನ್ನು ಈ ನಡುವೆ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಮತ್ತು ಬೆಂಗಳೂರು  ಪೂರ್ವ ವಲಯದ ಡಿಸಿಪಿ ಅಜಯ್ ಹಿಲ್ಲೊರಿ ಬೌರಿಂಗ್ ಆಸ್ಪತ್ರೆಗೆ ಭೇಟಿ ನೀಡಿ ಬಾಲಕಿಯ ಪೋಷಕರ ಜೊತೆ ಚರ್ಚೆ ನಡೆಸಿದ್ದಾರೆ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಹೇಳಿರುವ ಅವರು ಈ ಸಂಬಂಧ ನಗರ ಪೊಲೀಸ್ ಆಯುಕ್ತರ ಜೊತೆ ಮಾತುಕತೆ ನಡೆಸಿದ್ದಾಗಿ ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com