ಅರಣ್ಯ ಇಲಾಖೆಯಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ 'ಮಿನಿ ಲಾಲ್ ಬಾಗ್' ನಿರ್ಮಾಣ

ಅರಣ್ಯ ಇಲಾಖೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಮಿನಿ ಲಾಲ್ ಬಾಗ್ ನಿರ್ಮಾಣ ಮಾಡುವ ಯೋಜನೆ ಸಿದ್ಧಪಡಿಸುತ್ತಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 
ಬೆಂಗಳೂರು: ಅರಣ್ಯ ಇಲಾಖೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಮಿನಿ ಲಾಲ್ ಬಾಗ್ ನಿರ್ಮಾಣ ಮಾಡುವ ಯೋಜನೆ ಸಿದ್ಧಪಡಿಸುತ್ತಿದೆ.
'ನೀರಿಗಾಗಿ ಅರಣ್ಯ'  ಎಂಬ ಉದ್ದೇಶದೊಂದಿಗೆ ರಾಜ್ಯದ 30 ಜಿಲ್ಲೆಗಳಲ್ಲಿ ಲಾಲ್ ಬಾಗ್ ಮತ್ತು ಕಬ್ಬನ್ ಪಾರ್ಕ್ ಮಾದರಿಯಲ್ಲಿ ಸಸ್ಯ ಉದ್ಯಾನವನವನ್ನು ಅಭಿವೃದ್ಧಿಪಡಿಸಲು ಅರಣ್ಯ ಇಲಾಖೆ ಮುಂದಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರತಿ ಜಿಲ್ಲೆಯಲ್ಲೂ ಸುಮಾರು 30 ಎಕರೆ ಪ್ರದೇಶದಲ್ಲಿ ಈ ಸಸ್ಯ ಉದ್ಯಾನವನನ್ನು ಅಭಿವೃದ್ಧಿಪಡಿಸಲಾಗುವುದು. ಈ ಮಿನಿ ಲಾಲ್ ಬಾಗ್ ನಲ್ಲಿ ಪ್ರಮುಖವಾಗಿ ವೇಮ್, ಹೊಂಗೊ, ಎಮ್ಲಿಕಾ ಮರಗಳು ಹಾಗೂ ಹೂವಿನ ಗಿಡಗಳನ್ನು ನೆಡಲಾಗುವುದು. ಜಿಲ್ಲಾ ಕೇಂದ್ರಗಳ ಪ್ರಮುಖ ಭಾಗದಲ್ಲಿ ಸಸ್ಯ ಉದ್ಯಾನವನವನ್ನು ನಿರ್ಮಾಣ ಮಾಡುವುದು ಇದರ ಉದ್ದೇಶವಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
1998ರ ರಾಷ್ಟ್ರೀಯ ಅರಣ್ಯ ಕಾಯ್ದೆ ಪ್ರಕಾರ ಒಟ್ಟು ಭೂ ಪ್ರದೇಶದ ಶೇ.33ರಷ್ಟು ಪ್ರದೇಶ ಅರಣ್ಯ ಮತ್ತು ಮರ-ಗಿಡಗಳಿಂದ ಕೂಡಿರಬೇಕು. ಪ್ರಸ್ತೂತ ರಾಜ್ಯದಲ್ಲಿ ಶೇ.22ರಷ್ಟು ಮಾತ್ರ ಅರಣ್ಯ ಪ್ರದೇಶವಿದೆ. ಹೀಗಾಗಿ ಅರಣ್ಯ ಪ್ರದೇಶ ಹಾಗೂ ಮರ-ಗಿಡಗಳಿರುವ ಪ್ರದೇಶವನ್ನು ಹೆಚ್ಚು ಮಾಡುವುದು ನಮ್ಮ ಗುರಿಯಾಗಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com