ಹೆದ್ದಾರಿಗಳನ್ನು ಡಿನೋಟಿಫೈ ಮಾಡಲು ಪ್ರಸ್ತಾವನೆ: ಲಿಕ್ಕರ್ ಲಾಬಿಗೆ ಮಣಿದ ರಾಜ್ಯ ಸರ್ಕಾರ?

ಹೆದ್ದಾರಿಯಿಂದ 500 ಮೀಟರ್ ವ್ಯಾಪ್ತಿಯೊಳಗಿರುವ ಮದ್ಯದ ಅಂಗಡಿಗಳನ್ನು ಮುಚ್ಚುವಂತೆ ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ನಗರ ವ್ಯಾಪ್ತಿಯ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಬೆಂಗಳೂರು: ರಾಷ್ಟ್ರೀಯ ಹೆದ್ದಾರಿಯಿಂದ 500 ಮೀಟರ್ ವ್ಯಾಪ್ತಿಯೊಳಗಿರುವ ಮದ್ಯದ ಅಂಗಡಿಗಳನ್ನು ಮುಚ್ಚುವಂತೆ ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ  ನಗರ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿಯನ್ನು ‘ಸ್ಥಳೀಯ ಸಂಸ್ಥೆ ರಸ್ತೆ’ ಎಂದು ಡಿನೋಟಿಫೈ ಮಾಡುವಂತೆ ಕೇಂದ್ರಕ್ಕೆ ಶಿಫಾರಸು ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ. 
ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ವಿಷಯ ಚರ್ಚೆಗೆ ಬಂದಿದ್ದು, ಮಹಾನಗರ ಪಾಲಿಕೆ, ನಗರ ಪಾಲಿಕೆ, ನಗರಸಭೆ, ಪಟ್ಟಣ ಪಂಚಾಯತ್ ಮತ್ತು ಪುರಸಭೆ ವ್ಯಾಪ್ತಿಯಲ್ಲಿ ಹಾದು ಹೋಗುವ ರಸ್ತೆಗಳನ್ನು ‘ಉತ್ತಮ ನಿರ್ವಹಣೆ’ ದೃಷ್ಟಿಯಿಂದ ಡಿನೋಟಿಫೈ ಮಾಡುವಂತೆ ಶಿಫಾರಸು ಮಾಡಲು ನಿರ್ಧರಿಸಲಾಗಿದೆ ಎನ್ನಲಾಗಿದೆ.
ರಾಜ್ಯದಲ್ಲಿ ಒಟ್ಟು 6,572 ಕಿ.ಮೀ. ರಾಷ್ಟ್ರೀಯ ಹೆದ್ದಾರಿ ವಿಸ್ತೀರ್ಣ ಇದೆ. ಈ ಪೈಕಿ ನಗರ ಮತ್ತು ಪಟ್ಟಣಗಳ ಮಧ್ಯೆ 858 ಕಿ.ಮೀ. ಹಾದುಹೋಗಿದೆ. ಇದನ್ನು ನಗರ ಸ್ಥಳೀಯ ರಸ್ತೆ ಎಂದು ಘೋಷಿಸಿದರೆ ಶೇ 60ರಿಂದ 70ರಷ್ಟು ಮದ್ಯದಂಗಡಿಗಳು ಮುಚ್ಚುವುದು ತಪ್ಪಲಿದೆ ಎಂದು ಮೂಲಗಳು ತಿಳಿಸಿವೆ. 
ರಾಷ್ಟ್ರೀಯ ಹೆದ್ದಾರಿ ಸುತ್ತಮುತ್ತ 500 ಮೀಟರ್ ವ್ಯಾಪ್ತಿಯಲ್ಲಿ ಇರುವ ಮದ್ಯದ ಅಂಗಡಿಗಳನ್ನು ಮುಚ್ಚುವಂತೆ ಸುಪ್ರೀಂ ಕೋರ್ಟ್‌ ಇತ್ತೀಚೆಗೆ ತೀರ್ಪು ನೀಡಿತ್ತು.  ರಾಜ್ಯದ ಪ್ರಸ್ತಾವನೆಯನ್ನು ಕೇಂದ್ರ ಪುರಸ್ಕರಿಸಿದರೇ ಶೇ. 60 ರಷ್ಟು ಮದ್ಯದಂಗಡಿಗಳಿಗೆ ರಿಲೀಫ್ ಸಿಕ್ಕಂತಾಗುತ್ತದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com