ಅಪಾರ್ಟ್ ಮೆಂಟ್ ಗಳಲ್ಲಿ ಎಸ್‌ಟಿಪಿ ಅಳವಡಿಕೆಗೆ 3 ತಿಂಗಳ ಕಾಲಾವಕಾಶ

2016ರ ಫೆಬ್ರುವರಿಗಿಂತ ಮೊದಲು ನಿರ್ಮಾಣವಾದ ಅಪಾರ್ಟ್‌ಮೆಂಟ್‌ ಸಮುಚ್ಚಯಗಳಿಗೆ ತ್ಯಾಜ್ಯ ನೀರು ಶುದ್ಧೀಕರಣ ಘಟಕ (ಎಸ್‌ಟಿಪಿ) ಅಳವಡಿಸಿದರೆ ..
ಕೆ.ಜೆ ಜಾರ್ಜ್
ಕೆ.ಜೆ ಜಾರ್ಜ್
ಬೆಂಗಳೂರು: 2016ರ ಫೆಬ್ರುವರಿಗಿಂತ ಮೊದಲು ನಿರ್ಮಾಣವಾದ ಅಪಾರ್ಟ್‌ಮೆಂಟ್‌ ಸಮುಚ್ಚಯಗಳಿಗೆ ತ್ಯಾಜ್ಯ ನೀರು ಶುದ್ಧೀಕರಣ ಘಟಕ (ಎಸ್‌ಟಿಪಿ) ಅಳವಡಿಸಿದರೆ ಬೆಂಗಳೂರು ಜಲಮಂಡಳಿ ಶುಲ್ಕದಲ್ಲಿ ಶೇ 30ರಷ್ಟು ಕಡಿತ ಮಾಡುತ್ತೇವೆ ಎಂದು ಬೆಂಗಳೂರು ಅಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್‌ ಹೇಳಿದರು.
ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪ ವೇಲೆ ಜೆಡಿಎಸ್‌ನ ಆರ್. ಚೌಡರೆಡ್ಡಿ ತೂಪಲ್ಲಿ  ಪ್ರಶ್ನೆಗೆ ಸಚಿವರು ಉತ್ತರಿಸಿದ ಅವರು ಹಳೆಯ ಅಪಾರ್ಟ್‌ಮೆಂಟ್‌ ಸಮುಚ್ಚಯಗಳಲ್ಲಿ 50ಕ್ಕಿಂತ ಹೆಚ್ಚು ಫ್ಲ್ಯಾಟ್‌ಗಳಿದ್ದರೆ ಮತ್ತು 10,000 ಚ.ಮೀಟರ್‌ಗಿಂತ ಮೇಲ್ಪಟ್ಟ ವಿಸ್ತ್ರೀರ್ಣದ ವಿದ್ಯಾಸಂಸ್ಥೆಗಳಿಗೆ ತ್ಯಾಜ್ಯ ನೀರು  ಅಳವಡಿಸಿಕೊಳ್ಳುವುದನ್ನು ಕಡ್ಡಾಯ ಮಾಡಲಾಗಿದೆ ಎಂದರು. ಡಿಸೆಂಬರ್ 31ರವರೆಗೆ ಕಾಲಾವಕಾಶ ನೀಡಲಾಗಿದೆ ಎಂದು ಅವರು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com