ಕರ್ನಾಟಕ ಬಂದ್: ಕೋಲಾರ ಕಲ್ಲು ತೂರಾಟಕ್ಕೆ ಯತ್ನಿಸಿದ 8 ಮಂದಿ ಬಂಧನ!

ಬಯಲು ಸೀಮೆಗೆ ಶಾಶ್ವತ ನೀರಾವರಿ, ಮಹದಾಯಿ-ಕಳಸಾ ಬಂಡೂರಿ ಯೋಜನೆಯ ತ್ವರಿತ ಜಾರಿ, ಮೇಕೆದಾಟು ಯೋಜನೆ ಜಾರಿ, ರೈತರ ಸಾಲ ಮನ್ನಾ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ವಿವಿಧ ಕನ್ನಡ ಪರ ಸಂಘಟನೆಗಳು ನಡೆಸುತ್ತಿರುವ ಪ್ರತಿಭಟನೆ ಕೋಲಾರದಲ್ಲಿ ವ್ಯಾಪಕವಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 

ಬೆಂಗಳೂರು: ಬಯಲು ಸೀಮೆಗೆ ಶಾಶ್ವತ ನೀರಾವರಿ, ಮಹದಾಯಿ-ಕಳಸಾ ಬಂಡೂರಿ ಯೋಜನೆಯ ತ್ವರಿತ ಜಾರಿ, ಮೇಕೆದಾಟು ಯೋಜನೆ ಜಾರಿ, ರೈತರ ಸಾಲ ಮನ್ನಾ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ  ಒತ್ತಾಯಿಸಿ ವಿವಿಧ ಕನ್ನಡ ಪರ ಸಂಘಟನೆಗಳು ನಡೆಸುತ್ತಿರುವ ಪ್ರತಿಭಟನೆ ಕೋಲಾರದಲ್ಲಿ ವ್ಯಾಪಕವಾಗಿದೆ.

ಕೋಲಾರದ ಮುಳಬಾಗಿಲು ಪಟ್ಟಣದಲ್ಲಿ ಪ್ರತಿಭಟನಾಕಾರರು ಬೀದಿಗಿಳಿದು ಪ್ರತಿಭಟನೆ ಮಾಡುತ್ತಿದ್ದು, ಹೆದ್ದಾರಿ ತಡೆ ನಡೆಸಿದ್ದಾರೆ. ಹೆದ್ದಾರಿಯಲ್ಲಿ ಟೈರ್ ಗೆ ಬೆಂಕಿ ಇಡಲಾಗಿದ್ದು, ಈ ಭಾಗದಲ್ಲಿ ರಸ್ತೆ ಸಂಚಾರ ಅಸ್ತವ್ಯಸ್ಥವಾಗಿದೆ.  ಮುಳಬಾಗಿಲು ಪಟ್ಣಣದ ಕೊಂಡರಾಜನಹಳ್ಳಿಯಲ್ಲಿ ಕಲ್ಲುತೂರಾಟಕ್ಕೆ ಯತ್ನಿಸಿದ ಆರೋಪದ ಮೇರೆಗೆ ಪೊಲೀಸರು 8 ಮಂದಿ ಪ್ರತಿಭಟನಾ ಕಾರರನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.  ಇದೇ ವೇಳೆ ಮುಳಬಾಗಿಲು ಪಟ್ಟಣದ  ನುಂಗಲಿ ಟೋಲ್ ಬಳಿ ಗಲಾಟೆ ಯತ್ನಿಸಿದ ಆರೋಪದ ಮೇರೆಗೆ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇತ್ತ ನಗರ ಹೊರವಲಯದ ಆನೇಕಲ್ ಪಟ್ಟಣದಲ್ಲೂ ಪ್ರತಿಭಟನೆ ತೀವ್ರಗೊಂಡಿದ್ದು, ಕರವೇ ಪ್ರವೀಣ್ ಶೆಟ್ಟಿ ಬಣದ ಕಾರ್ಯಕರ್ತರು ರಸ್ತೆ ತಡೆ ನಡೆಸಿದ್ದಾರೆ. ಅಂತೆಯೇ ಕೆಲ ಪ್ರತಿಭಟನಾಕಾರರು ಬಲವಂತವಾಗಿ ಅಂಗಡಿ  ಮುಂಗಟ್ಟುಗಳನ್ನು ಮುಚ್ಚಿಸುತ್ತಿರುವ ಘಟನೆ ಕೂಡ ವರದಿಯಾಗಿದೆ. ಇಂತಹುದೇ ಘಟನೆ ರಾಮನಗರಲ್ಲೂ ವರದಿಯಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com