ಜಂತಕಲ್ ಮೈನಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಾರ್ದನ ರೆಡ್ಡಿ ಇಂದು ಎಸ್ಐಟಿ ಮುಂದೆ ವಿಚಾರಣೆಗೆ ಹಾಜರಾಗಿದ್ದರು. ಎಸ್ ಐಟಿ ವಿಚಾರಣೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವ, ನಾನು ಕಳೆದ 10 ವರ್ಷಗಳಿಂದ ಸಾಕ್ಷ್ಯಗಳನ್ನು ಕಾಪಾಡಿಕೊಂಡು ಬಂದಿದ್ದೇನೆ. ನನ್ನ ಆರೋಪಕ್ಕೆ ಪೂರಕವಾದ ಎಲ್ಲಾ ರೀತಿಯ ದಾಖಲೆ, ವಿಡಿಯೋ ಸೀಡಿ ಹಾಗೂ ಬ್ಯಾಂಕ್ ಸ್ಟೇಟ್ ಮೆಂಟ್ ಅನ್ನು ಎಸ್ ಐಟಿ ಅಧಿಕಾರಿಗಳಿಗೆ ನೀಡಿದ್ದೇನೆ. ಸುಪ್ರೀಂ ಕೋರ್ಟ್ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ಹೀಗಾಗಿ ತನಿಖೆಯ ಕುರಿತು ಹೆಚ್ಚಿನ ಮಾಹಿತಿ ನೀಡುವ ಅಗತ್ಯವಿಲ್ಲ ಎಂದರು.