ಪ್ಲಾಸ್ಟಿಕ್ ಅಕ್ಕಿ, ಮೊಟ್ಟೆ ಎಂಬುದು ಸುಳ್ಳು ಸುದ್ದಿ : ರಮೇಶ್ ಕುಮಾರ್

ಪ್ಲಾಸ್ಟಿಕ್ ಅಕ್ಕಿ, ಮೊಟ್ಟೆ, ಸಕ್ಕರೆ ಎಂಬುದೆಲ್ಲಾ ಸುಳ್ಳು ಸುದ್ದಿ ಎಂದು ಆರೋಗ್ಯ ಸಚಿವ ಕೆ. ರಮೇಶ್ ಕುಮಾರ್ ವಿಧಾನ ಪರಿಷತ್ ನಲ್ಲಿ ಸ್ಪಷ್ಟ ಪಡಿಸಿದ್ದಾರೆ...
ರಮೇಶ್ ಕುಮಾರ್
ರಮೇಶ್ ಕುಮಾರ್
ಬೆಂಗಳೂರು: ಪ್ಲಾಸ್ಟಿಕ್ ಅಕ್ಕಿ, ಮೊಟ್ಟೆ, ಸಕ್ಕರೆ ಎಂಬುದೆಲ್ಲಾ ಸುಳ್ಳು ಸುದ್ದಿ ಎಂದು ಆರೋಗ್ಯ ಸಚಿವ ಕೆ. ರಮೇಶ್ ಕುಮಾರ್ ವಿಧಾನ ಪರಿಷತ್ ನಲ್ಲಿ  ಸ್ಪಷ್ಟ ಪಡಿಸಿದ್ದಾರೆ.
ಬಿಜೆಪಿಯ ಗಣೇಶ್ ಕಾರ್ಣಿಕ್ ಪ್ರಶ್ನೆಗೆ ಉತ್ತರಿಸಿದ ರಮೇಶ್ ಕುಮಾರ್ ಹಾಗೂ ಯು.ಟಿ. ಖಾದರ್ ಇದರ ಬಗ್ಗೆ ತನಿಖೆಗೆ ಆದೇಶಿಸಿದ್ದರು. ತನಿಖೆ  ನಡೆದು ಅದರಲ್ಲಿ ಯಾವುದೇ ಪ್ಲಾಸ್ಟಿಕ್ ಅಕ್ಕಿ, ಮತ್ತು ಪ್ಲಾಸ್ಟಿಕ್ ಸಕ್ಕರೆ ಪತ್ತೆಯಾಗಿಲ್ಲ ಎಂದು ಹೇಳಿದ್ದಾರೆ.
ಪರೀಕ್ಷೆ ಮೂಲಕ ಅದನ್ನು ಸ್ಪಷ್ಟ ಪಡಿಸುವುದಾಗಿ ರಮೇಶ್ ಕುಮಾರ್ ತಮ್ಮ ಪ್ರತಿಕ್ರಿಯೆಯಲ್ಲಿ ಹೇಳಿದ್ದಾರೆ. ನಾವು ಮೊಟ್ಟೆ, ಅಕ್ಕಿ ಮತ್ತು ಸಕ್ಕರೆ ಮಾದರಿಗಳನ್ನು ಎಲ್ಲಾ ಜಿಲ್ಲೆಗಳಿಂದ ತರಿಸಿಕೊಂಡು ಪರೀಕ್ಷೆ ನಡೆಸಿದ್ದೇವೆ. ಆದರೆ ಎಲ್ಲದರಲ್ಲೂ ನೆಗೆಟಿವ್ ಫಲಿತಾಂಶ ಬಂದಿದೆ ಎಂದು ಹೇಳಿದ್ದಾರೆ.
ಒಂದು ಕೆಜಿ ಪ್ಲಾಸ್ಟಿಕ್ ಅಕ್ಕಿ ತಯಾರಿಕೆಗೆ 200 ರು ಖರ್ಚಾಗುತ್ತದೆ, ಆದರೆ ಒಂದು ಕೆಜಿ ಅಕ್ಕಿ 40 ರೂಗೆ ಸಿಗುತ್ತದೆ, ಹೀಗಿರುವಾಗ ಅಷ್ಟೊಂದು ಹಣ ಖರ್ಚು ಮಾಡಿ ಪ್ಲಾಸ್ಟಿಕ್ ಅಕ್ಕಿ ಖರೀದಿಸುವ ಅಗತ್ಯವೇನಿದೆ ಎಂದು ಪ್ರಶ್ನಿಸಿದ್ದಾರೆ. 
ಅನ್ನಭಾಗ್ಯ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಂಶ ಇದೆ ಎಂಬ ಗಾಳಿಸುದ್ದಿ ಹರಡಿತ್ತು. ನಾವು ಛತ್ತೀಸ್ ಘಡದಿಂದ ಅಕ್ಕಿಯನ್ನು ಭಾರತೀಯ ಆಹಾರ ನಿಗಮದ ಮೂಲಕ ಖರೀದಿಸುತ್ತಿದ್ದೇವೆ ಎಂದು ಯು.ಟಿ ಖಾದರ್ ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com