
ಮೈಸೂರು: ಕೆಎಸ್ಆರ್ ಟಿಸಿ ಬಸ್ ಚಾಲಕನ ನಿರ್ಲಕ್ಷ್ಯ ಚಾಲನೆಗೆ ಮೈಸೂರಿನಲ್ಲಿ ಅಮಾಯಕ ಬೈಕ್ ಸವಾರನೊಬ್ಬ ಸಾವನ್ನಪ್ಪಿರುವ ಘಟನೆ ಮಂಗಳವಾರ ನಡೆದಿದೆ.
ಮೈಸೂರು ಜಿಲ್ಲೆಯ ಹುಣಸೂರು ಪಟ್ಟಣದಲ್ಲಿ ಈ ಭೀಕರ ಅಪಘಾತ ಸಂಭವಿಸಿದ್ದು, ಮಾಗಳಿ ಗ್ರಾಮದ ಮಂಜುನಾಥ್ ಹಾಗೂ ರವಿಕುಮಾರ್ ಬೈಕ್ ನಲ್ಲಿ ತೆರಳುತ್ತಿದ್ದಾಗ ಬೈಕ್ ವೊಂದನ್ನು ಹಿಂದಿಕ್ಕುವ ರಭಸದಲ್ಲಿ ಕೆಎಸ್ ಆರ್ ಟಿಸಿ ಬಸ್ ಚಾಲಕ ಎದುರಿಗೆ ಬರುತ್ತಿದ್ದ ಇವರ ಬೈಕ್ ಗೆ ನೇರವಾಗಿ ಢಿಕ್ಕಿ ಹೊಡೆದಿದ್ದಾನೆ. ಢಿಕ್ಕಿಯ ರಭಸಕ್ಕೆ ಬೈಕ್ ನಲ್ಲಿದ್ದ ರವಿಕುಮಾರ್ ಹಾಗೂ ಮಂಜುನಾಥ್ ಬೈಕ್ ಎಗರಿ ಪಕ್ಕದಲ್ಲಿ ಬಿದ್ದಿದ್ದು, ಈ ವೇಳೆ ಓರ್ವ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮಂಗಳವಾರ ಮಧ್ಯಾಹ್ನ ಈ ಅಪಘಾತ ಸಂಭವಿಸಿದೆ. ಸಿಸಿ ಕ್ಯಾಮೆರಾದಲ್ಲಿ ಅಪಘಾತದ ಭಯಾನಕ ದೃಶ್ಯ ಸೆರೆಯಾಗಿದೆ. ಘಟನೆ ಬಗ್ಗೆ ಹುಣಸೂರು ಪಟ್ಟಣ ಪೊ ಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನು ಘಟನೆ ನಡೆದು 24 ಗಂಟೆಗಳೇ ಕಳೆದರೂ ಇಲಾಖೆಯ ಯಾವೊಬ್ಬ ಅಧಿಕಾರಿಗಳು ಕೂಡ ಇತ್ತ ಮುಖ ಮಾಡಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿಡಿಯೋಗಾಗಿ ಇಲ್ಲಿ ಕ್ಲಿಕ್ ಮಾಡಿ
Advertisement