ಬೆಂಗಳೂರಿನಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ, ಪತಿ ಸೇರಿ ನಾಲ್ವರ ವಿರುದ್ಧ ದೂರು

ಬೆಂಗಳೂರಿನ ಭಾರತೀನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 34 ವರ್ಷದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ್ದು,...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 
ಬೆಂಗಳೂರು: ಬೆಂಗಳೂರಿನ ಭಾರತೀನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 34 ವರ್ಷದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ್ದು, ಅಸ್ವಸ್ಥ ಸಂತ್ರಸ್ತೆಯನ್ನು ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ. 
ಪತಿ ಸೇರಿ ಆತನ ಮೂವರು ಸ್ನೇಹಿತರು ಜೊತೆಗೂಡಿ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂದು ಮಹಿಳೆ ದೂರಿದ್ದಾರೆ. ಆದರೆ ಆಕೆಯ ಮೇಲೆ ನಾಲ್ವರು ಕಾಮುಕರು ಸಾಮೂಹಿಕ ಅತ್ಯಾಚಾರ ನಡೆಸಿ ಅಟ್ಟಹಾಸ ಮೆರೆದು ಪರಾರಿಯಾಗಿದ್ದು, ಅರೆಪ್ರಜ್ಞಾವಸ್ಥೆಯಲ್ಲಿದ್ದ ಮಹಿಳೆ ಕುರಿತು ಸ್ಥಳೀಯರೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.
ಬಂಬೂಬಜಾರ್ ಬಳಿ ವಾಸಿಸುತ್ತಿದ್ದ ಮಹಿಳೆಯ ಮೇಲೆ ಆತನ ಪತಿ ಸೇರಿ ನಾಲ್ವರು ದುಷ್ಕರ್ಮಿಗಳು ಕಳೆದ ಜೂ.೧೧ರಂದು ಸಾಮೂಹಿಕ ಅತ್ಯಾಚಾರ ನಡೆಸಿದ್ದು, ಆಘಾತಗೊಂಡ ಮಹಿಳೆಯು ಬೌರಿಂಗ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕೃತ್ಯ ನಡೆದ ನಾಲ್ಕೈದು ದಿನಗಳ ಬಳಿಕ ಪ್ರಕರಣ ಬೆಳಕಿಗೆ ಬಂದಿದ್ದು, ಮಹಿಳೆ ರಂಜಾನ್ ಉಪವಾಸ ಇರುವ ಕಾರಣ ದೂರು ನೀಡಲು ಹಿಂದೇಟು ಹಾಕಿರುವುದಾಗಿ ತಿಳಿಸಿದ್ದಾರೆ.
ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿ ಇಂತಹ ಹೀನಕೃತ್ಯ ನಡೆಸಿದ್ದಾನೆ ಎನ್ನಲಾಗಿದ್ದು, ಮಹಿಳೆ ನೀಡಿರುವ ದೂರು ಸಂಶಯಾಸ್ಪದವಾಗಿದೆ. ಒಂದು ಬಾರಿ ಬಂಬೂಬಜಾರ್ ಬಳಿ ಕೃತ್ಯ ನಡೆದಿದೆ ಎಂದು ಹೇಳಿದರೆ ಮತ್ತೊಂದು ಬಾರಿ ಕೆ.ಆರ್. ಪುರಂ ಬಳಿ ನಡೆದಿದೆ ಎನ್ನುತ್ತಿದ್ದು, ಕೂಲಂಕಷ ತನಿಖೆ ಕೈಗೊಳ್ಳಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ ಹೇಮಂತ್ ನಿಂಬಾಳ್ಕರ್ ಅವರು ತಿಳಿಸಿದ್ದಾರೆ.
ಸಂತ್ರಸ್ತ ಮಹಿಳೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಆಘಾತಕ್ಕೊಳಗಾಗಿರುವ ಆಕೆ ಪೂರ್ಣಪ್ರಮಾಣದಲ್ಲಿ ಚೇತರಿಸಿಕೊಂಡ ಬಳಿಕ ಹೆಚ್ಚಿನ ಮಾಹಿತಿ ಪಡೆಯಲಾಗುವುದು ಎಂದು ಪೂರ್ವ ವಿಭಾಗದ ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com